ಐಟಿ, ಇಡಿ ಅಧಿಕಾರ ಕಡಿವಾಣಕ್ಕೆ ಆಂಧ್ರ ಸಿಎಂ ಕಾನೂನು ಸಮರ

ಈ ಸುದ್ದಿಯನ್ನು ಶೇರ್ ಮಾಡಿ

Chandrababu-Naidu

ಅಮರಾವತಿ,ನ.20- ರಾಜ್ಯದಲ್ಲಿ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಒಪ್ಪಿಗೆಯ ಅನುಮತಿಯನ್ನು ಹಿಂಪಡೆದು , ಈ ಮೂಲಕ ಕೇಂದ್ರ ಸರ್ಕಾರ ರಾಜ್ಯದಲ್ಲಿ ನಡೆಸುತ್ತಿದ್ದ ತನಿಖೆಗಳಿಗೆ ಬ್ರೇಕ್ ಹಾಕಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತೀಗ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯದಂತಹ ಕೇಂದ್ರೀಯ ಏಜೆನ್ಸಿಗಳ ಅಧಿಕಾರವನ್ನು ಮೊಟಕುಗೊಳಿಸುವಂತೆ ಸುಪ್ರೀಂಕೋರ್ಟ್‍ಗೆ ಮನವಿ ಮಾಡಲು ನಿರ್ಧರಿಸಿದ್ದಾರೆ.

ಬಿಜೆಪಿಯ ಎಲ್ಲಾ ವಿರೋಧಿ ಪಕ್ಷಗಳೊಂದಿಗೆ ದಿಲ್ಲಿಯಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ (ಸಿಎಂಪಿ) ವನ್ನು ಸಿದ್ಧಗೊಳಿಸುತ್ತೇವೆ. ಸಿಎಂಪಿ ಸಿದ್ಧವಾದಾಗ ಎಲ್ಲ ವಿರೋಧ ಪಕ್ಷಗಳು ಸೇರಿ ಕೇಂದ್ರೀಯ ಏಜೆನ್ಸಿಗಳಿಗೆ ತಮ್ಮ ತಮ್ಮ ರಾಜ್ಯದಲ್ಲಿ ನಡೆಸುತ್ತಿರುವ ತನಿಖೆಯನ್ನು ನಿಲ್ಲಿಸುವಂತೆ ಕೇಂದ್ರೀಯ ಏಜೆನ್ಸಿಗಳಿಗೆ ಸೂಚನೆ ನೀಡಲಿವೆ. ಈ ಮೂಲಕ ಕೇಂದ್ರದ ರಾಜಕೀಯ ಅಜೆಂಡಾವನ್ನು ಹತ್ತಿಕ್ಕುವುದು ನಮ್ಮ ಉದ್ದೇಶವಾಗಿದೆ ಎಂದು ಟಿಡಿಪಿ ಸಂಸದರೊಬ್ಬರು ತಿಳಿಸಿದ್ದಾರೆ.

ಎಲ್ಲ ಪಕ್ಷಗಳು ( ಬಿಜೆಪಿ ವಿರೋಧಿ) ಮತ್ತೊಂದು ಸಮಾಲೋಚನಾ ಸಭೆ ನಡೆಸಲಿವೆ. ಅಗತ್ಯವಿದ್ದರೆ ಮತ್ತು ಒಮ್ಮತವಾದರೆ, ಆದಾಯ ತೆರಿಗೆ ಮತ್ತು ಇಡಿ ಅಧಿಕಾರಿಗಳನ್ನು ಮೊಟಕುಗೊಳಿಸುವಂತೆ ಸರ್ವೋಚ್ಚ ನ್ಯಾಯಾಲಯಕ್ಕೆ ಈ ಬಗ್ಗೆ ಮನವಿ ಮಾಡಿಕೊಳ್ಳುತ್ತೇವೆ ಎಂದು ಸಂಸದ ಸಿಎಂ ರಮೇಶ್, ಶಾಸಕ ಪೊಥುಲಾ ರಾಮರಾವ್ , ಮಾಜಿ ಶಾಸಕ ಬೀಡಾ ಮಸ್ತಾನ್ ರಾವ್ ಸೇರಿದಂತೆ ಟಿಡಿಪಿ ಮುಖಂಡರ ಉದ್ಯಮ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಹುಡುಕಾಟ ಪ್ರಾರಂಭಿಸಿದೆ. ಇದೆಲ್ಲ ನಡೆಯುತ್ತಿರುವುದು ನಾವು ಎನ್‍ಡಿಎ ಕೂಟದಿಂದ ಹೊರಬಿದ್ದ ಮೇಲೆ ಎಂದು ಟಿಡಿಪಿ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಸಿಬಿಐ, ಜಾರಿ ನಿರ್ದೇಶನಾಲಯ (ಇಡಿ), ಅದಾಯ ತೆರಿಗೆ ಇಲಾಖೆ (ಐಟಿ) ತನಿಖಾಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ತಮ್ಮ ರಾಜಕೀಯ ವೈರಿಗಳ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ನಾಯ್ಡು ಇತ್ತೀಚೆಗೆ ಆರೋಪಿಸಿದ್ದರು. ಇದರ ಬೆನ್ನಲ್ಲೇ, ರಾಜ್ಯದಲ್ಲಿ ಸಿಬಿಐ ಅಧೀನದಲ್ಲಿರುವ ಎಲ್ಲಾ ಪ್ರಕರಣಗಳ ತನಿಖೆಯನ್ನು ನಡೆಸಲು ಸಿಬಿಐ ಬದಲಾಗಿ ಎಸಿಬಿ (ಭ್ರಷ್ಟಚಾರ ನಿಗ್ರಹ ದಳ)ಗೆ ಜವಾಬ್ದಾರಿಯನ್ನ ವರ್ಗಾವಣೆ ಮಾಡಲಾಗಿದೆ ಎಂದು ಆಂಧ್ರಪ್ರದೇಶ ಸರ್ಕಾರ ಅಧಿಸೂಚನೆ ಹೊರಡಿಸಿತು.

Facebook Comments

Sri Raghav

Admin