“ಬಿಜೆಪಿಯವರು IAS- IPS ಅಧಿಕಾರಿಗಳನ್ನು ಗನ್‌ಪಾಯಿಂಟ್‌ನಲ್ಲಿ ಇಟ್ಟಿದಾರೆ”

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ನ.5-ಬಿಜೆಪಿಯವರು ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಗನ್‌ಪಾಯಿಂಟ್‌ನಲ್ಲಿ ಹೆದರಿಸಿ ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಎನ್.ಲಕ್ಷ್ಮಣ್ ಗಂಭೀರ ಆರೋಪ ಮಾಡಿದರು.

ಜಿಲ್ಲಾ ಪತ್ರಕರ್ತರ ಭವನದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ತಾವು ಹೇಳಿದಂತೆಯೇ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಆದೇಶಿಸುತ್ತಾರೆ. ಒಂದು ವೇಳೆ ತನಿಖೆ ನಡೆಸದಿದ್ದರೆ ಅಂತಹ ಅಧಿಕಾರಿಯನ್ನು ವರ್ಗಾವಣೆ ಮಾಡಿಸುತ್ತಾರೆ. ಇಲ್ಲದಿದ್ದರೆ ಅವರ ವಿರುದ್ಧವೇ ದೂರು ದಾಖಲಿಸುವಂತಹ ಕೆಲಸ ಮಾಡುವ ಮೂಲಕ ಇಡೀ ದೇಶವನ್ನೇ ತಮ್ಮ ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳಲು ಹೊರಟಿದ್ದಾರೆ ಎಂದು ದೂರಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಡಿಯೋ ಪ್ರಕರಣದಲ್ಲಿ ಅಮಿತ್ ಷಾ ಹಾಗೂ ಬಿಎಸ್‌ವೈ ಅವರನ್ನು ಪ್ರಮುಖ ಆರೋಪಿಗಳನ್ನಾಗಿ ಪರಿಗಣಿಸಬೇಕೆಂದು ನ್ಯಾಯಾಲಯವನ್ನು ಒತ್ತಾಯಿಸುತ್ತೇನೆ ಎಂದು ಹೇಳಿದರು. ತಮ್ಮ ಕಾರ್ಯ ಸಾಧಿಸಲು ಮೋದಿ ಮತ್ತು ಅಮಿತ್ ಷಾ ಜೋಡಿ ಏನು ಬೇಕಾದರೂ ಮಾಡಲು ಸಿದ್ಧರಿದ್ದಾರೆ ಎಂದು ಟೀಕಿಸಿದರು.

ಯಡಿಯೂರಪ್ಪನವರು ತಾವು ಆಡಿರುವ ಮಾತುಗಳನ್ನು ಒಪ್ಪಿಕೊಂಡಿರುವುದರಿಂದ ಹಾಗೂ ಅಮಿತ್‌ಷಾ ಅರ್ಹರ ವಿಷಯದಲ್ಲಿ ಮಾತನಾಡಿರುವುದರಿಂದ ಅವರಿಬ್ಬರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಲಕ್ಷ್ಮಣ್ ಆಗ್ರಹಿಸಿದರು.

Facebook Comments