ಸಿಡಿಲು ಬಡಿದು ಮಹಿಳೆ ಸಾವು, 5 ಲಕ್ಷ ಪರಿಹಾರ

ಈ ಸುದ್ದಿಯನ್ನು ಶೇರ್ ಮಾಡಿ

ನಾಗಮಂಗಲ, ಅ.16- ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಸಬಾ ಹೋಬಳಿಯ ಕಸುವಿನಹಳ್ಳಿ ಗ್ರಾಮದಲ್ಲಿ ಸಂಜೆ ಸಂಭವಿಸಿದೆ. ಗ್ರಾಮದ ಕೆ.ಬಿ.ನಾರಾಯಣ ಎಂಬುವರ ಪತ್ನಿ ಪುಟ್ಟತಾಯಮ್ಮ (65) ಎಂಬುವರೇ ಸಿಡಿಲು ಬಡಿದು ಸಾವನ್ನಪ್ಪಿರುವ ಮಹಿಳೆ.

ಜಮೀನಿನ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ವೇಳೆ ಸಿಡಿಲು ಬಡಿದು ಪುಟ್ಟತಾಯಮ್ಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಕಂದಾಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿ ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿ ಶವ ಪರೀಕ್ಷೆಗೊಳಪಡಿಸಲಾಯಿತು.  ಬಳಿಕ ತಹಶೀಲ್ದಾರ್ ಎಂ.ವಿ.ರೂಪಾ, ಡಿವೈಎಸ್‍ಪಿ ವಿಶ್ವನಾಥ್, ಪಟ್ಟಣ ಪೊಲೀಸ್ ಠಾಣೆಯ ಪಿಎಸ್‍ಐ ರವಿಕಿರಣ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಹಾರದ ಚೆಕ್ :
ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಸುದ್ದಿ ತಿಳಿದ ಪಾಂಡವಪುರ ಉಪವಿಭಾಗಾಧಿಕಾರಿ ಶೈಲಜ, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ಕೊಟ್ಟು ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ, 5ಲಕ್ಷ ರೂ. ಪರಿಹಾರದ ಚೆಕ್‍ನ್ನು ಮೃತರ ವಾರಸುದಾರರಿಗೆ ಸ್ಥಳದಲ್ಲಿಯೇ ನೀಡಿದರು.

ಈ ಸಂಬಂಧ ಪಟ್ಟಣಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ