ರೇಣುಕಾಚಾರ್ಯಗೆ ಎಂಟಿಬಿ ತಿರುಗೇಟು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.25- 105 ಶಾಸಕರಿದ್ದರೆ ಸರ್ಕಾರ ರಚನೆ ಮಾಡಲು ಏಕೆ ಸಾಧ್ಯವಾಗಲಿಲ್ಲ ಎಂದು ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಅವರು ರೇಣುಕಾಚಾರ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರಚನೆ ಮಾಡಲು 105 ಶಾಸಕರಿದ್ದರೂ ಸಾಧ್ಯವಾಗಿರಲಿಲ್ಲ. 17 ಮಂದಿ ಶಾಸಕರು ಬಂದಿದ್ದರಿಂದಲೇ ಸರ್ಕಾರ ರಚನೆ ಸಾಧ್ಯವಾಯಿತು. ಇದನ್ನೂ ಯಾರೂ ಮರೆಯಬಾರದು ಎಂದು ಪರೋಕ್ಷವಾಗಿ ಎಂ.ಪಿ.ರೇಣುಕಾಚಾರ್ಯ ವಿರುದ್ದ ವಾಗ್ದಾಳಿ ನಡೆಸಿದರು.

17 ಶಾಸಕರು ಮುಖ್ಯ ಎಂಬುದನ್ನು ಮರೆಯಬಾರದು. ನಾವು ಹಿಂದಿನ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದಿದ್ದೇವೆ. ಈಗ ನಾವು ಕೂಡ ಇಲ್ಲಿನವರೇ. ಇಲ್ಲಿ ವಲಸಿಗ, ಮೂಲ ಎಂಬ ಪ್ರಶ್ನೆ ಇಲ್ಲ. ಎಲ್ಲರೂ ಒಂದೇ ಮನೆಯಲ್ಲಿದ್ದೇವೆ. ನಾವು ಪಕ್ಷಕ್ಕೆ ಬಂದ ಮೇಲೆ ಬಿಜೆಪಿಯವರೇ ತಾನೇ ಎಂದು ಪ್ರಶ್ನಿಸಿದರು.
ಸಂಪುಟ ವಿಸ್ತರಣೆ ಯಾಕೆ ವಿಳಂಬವಾಗುತ್ತಿದೆ ಎಂಬುದು ತಿಳಿಯುವುದಿಲ್ಲ. ಶೀಘ್ರವಾಗಿ ವಿಸ್ತರಣೆಯಾಗಲಿ ಎಂದು ಹೇಳಿದರು.

Facebook Comments