ಕನ್ನಡಪರ ಹೋರಾಟಗಾರ ನಾಗೇಶ್ ಕೊರೊನಾಗೆ ಬಲಿ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.25- ಕನ್ನಡಪರ ಹೋರಾಟಗಾರರನ್ನು ಕೊರೊನಾ ಮಹಾಮಾರಿ ಬಲಿ ಪಡೆದುಕೊಂಡಿದೆ. ಕನ್ನಡಪರ ಹೋರಾಟಗಾರ ನಾಗೇಶ್ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಳೆದ 10 ದಿನಗಳ ಹಿಂದೆ ನಾಗೇಶ್ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಜ್ವರದಿಂದ ಬಳಲುತ್ತಿದ್ದ ಅವರು ಮಾತ್ರೆ ಸೇವಿಸಿದ್ದರಿಂದ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು.

ಹೀಗಾಗಿ ಎರಡು ದಿನಗಳ ಹಿಂದೆ ಸುಂಕದಕಟ್ಟೆ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ನಾಗೇಶ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ ನಾಗೇಶ್ ಮೃತಪಟ್ಟಿದ್ದಾರೆ.

ನಾಗೇಶ್ ಅವರ ನಿಧನಕ್ಕೆ ಕನ್ನಡಪರ ಸಂಘಟನೆಗಳ ಹೋರಾಟಗಾರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Facebook Comments

Sri Raghav

Admin