ಕರ್ನಾಟಕವನ್ನು ಡ್ರಗ್ಸ್ ಮುಕ್ತ ಮಾಡುವ ತನಕ ವಿರಮಿಸುವುದಿಲ್ಲ : ಕಟೀಲ್
ಈ ಸುದ್ದಿಯನ್ನು ಶೇರ್ ಮಾಡಿ
ಬೆಂಗಳೂರು,ಸೆ.5- ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡುವ ತನಕ ನಮ್ಮ ಪಕ್ಷ ವಿರಮಿಶುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಮೂಲಕ ಜಾಲವನ್ನು ಬುಡಸಮೇತ ಕಿತ್ತು ಹಾಕುವ ತನಕ ವಿರಮಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೆÇಲೀಸ್ ಇಲಾಖೆಯ ಕರ್ತವ್ಯದಲ್ಲಿದ್ದ ಅಧಿಕಾರಿಗಳಿಗೆ ಗೃಹ ಸಚಿವರು ಸಂಪೂರ್ಣವಾಗಿ ಮುಕ್ತ ಸ್ವಾತಂತ್ರ್ಯ ನೀಡಿದ್ದಾರೆ. ಇದಕ್ಕೆ ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಪ್ರಜ್ಞಾವಂತ ನಾಗರಿಕರು ಸ್ವಾಗತಿಸಿದ್ದಾರೆ. ಎಷ್ಟೇ ಪ್ರಭಾವಿ ವ್ಯಕ್ತಿಯಾದರೂ ಈ ನೆಲದ ಕಾನೂನನ್ನು ಮುರಿದರೆ ಕ್ಷಮಿಸಲು ಸಾಧ್ಯವಿಲ್ಲ ಎಂದು ಕಟೀಲು ತಿಳಿಸಿದ್ದಾರೆ.
Facebook Comments