‘ಸುಪ್ರೀಂ ತೀರ್ಪನ್ನು ಸ್ವಾಗತಿಸುತ್ತೇವೆ, ಚುನಾವಗೆ ಸಿದ್ಧತೆ ಮಾಡಿಕೊಳ್ಳುತ್ತೇವೆ’ : ಕಟೀಲ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.13-ರಾಜ್ಯದ ಹದಿನೇಳು ಜನ ಶಾಸಕರ ಅನರ್ಹತೆ ಕುರಿತಂತೆ ಸ್ಪೀಕರ್‌ ನೀಡಿದ ತೀರ್ಮಾನವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಅದರ ಜೊತೆಗೆ ಆ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿರುವ ತೀರ್ಪನ್ನು ತಾವು ಸ್ವಾಗತಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ತೀರ್ಪಿನಿಂದ ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ದೊರೆತಿದೆ. ಈಗಾಗಲೇ ಚುನಾವಣೆ ಸಹ ನಿಗದಿಯಾಗಿದೆ. ಮುಂದಿನ ದಿನಗಳಲ್ಲಿ ಚುನಾವಣೆಗಾಗಿ ತಯಾರಿ ನಡೆಸಲು ನಿಶ್ಚಯ ಮಾಡಲಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅನರ್ಹರ ಶಾಸಕರ ಪಕ್ಷ ಸೇರ್ಪಡೆ ಕುರಿತಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ವಿಷಯವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತನಾಡಿ ನಂತರ ತೀರ್ಮಾನ ಕೈಗೊಳ್ಳಲಿದ್ದೇವೆ. ಎಲ್ಲಾ ವಿಷಯಗಳನ್ನು ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.

Facebook Comments