ಜಮೀರ್ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಿ ಬಂಧಿಸುವಂತೆ ಕಟೀಲ್ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.25- ಪಾದರಾಯನಪುರದಲ್ಲಿ ಗೂಂಡಾಗಳಂತೆ ಹಲ್ಲೆ ನಡೆಸಿದ ಪುಂಡರಿಗೆ ಪ್ರಚೋದನೆ ನೀಡಿದವರೇ ಶಾಸಕ ಜಮೀರ್ ಅಹಮದ್ ಖಾನ್ ಎಂದು ದೂರಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಜಮೀರ್ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಿ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.

ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ಪಾದರಾಯನಪುರದಲ್ಲಿ ಹಲ್ಲೆ ನಡೆಯಲು ಜಮೀರ್ ಅಹಮದ್ ಖಾನ್‍ರೇ ಎಂದು ಆರೋಪಿಸಿದರು. ನಮ್ಮ ಬಿಜೆಪಿ ನಿಯೋಗ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೆಲವು ಮನವಿಗಳನ್ನು ಮಾಡಿದ್ದು , ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

ಸಂಕಷ್ಟದಲ್ಲಿರುವ ಕೈಗಾರಿಕೆಗಳ ಸಮಸ್ಯೆಗೆ ಸ್ಪಂದಿಸಬೇಕು. ಶಿಕ್ಷಣಕ್ಕೆ ವಿಶೇಷ ಆದ್ಯತೆ ಕೊಡಬೇಕು. ಯಾವುದೇ ಖಾಸಗಿ ಸಂಸ್ಥೆ ಬಲವಂತವಾಗಿ ಶುಲ್ಕ ವಸೂಲಿ ಮಾಡದಂತೆ ನೋಡಿಕೊಳ್ಳಬೇಕು ಎಂದು ಕೋರಿದ್ದೇವೆ. ಹಾಗೆಯೇ ಕೊರೊನಾ ವಾರಿಯರ್ಸ್‍ಗಳಾದ ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರಿಗೆ ವಿಶೇಷ ಸಂಭಾವನೆ ಕೊಡಬೇಕೆಂದು ತಿಳಿಸಿದರು.

ಹೊರ ರಾಜ್ಯಗಳು ಮತ್ತು ಬೇರೆ ದೇಶಗಳಲ್ಲಿ ತೊಂದರೆಗೆ ಒಳಗಾಗಿರುವ ಕನ್ನಡಿಗರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಆಯಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ , ಆಯಾ ದೇಶಗಳ ಮುಖ್ಯಸ್ಥರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾತುಕತೆ ನಡೆಸಬೇಕೆಂದು ಕೋರಿದ್ದೇವೆ ಎಂದು ಹೇಳಿದರು.

Facebook Comments

Sri Raghav

Admin