“ಸಂಪುಟದಲ್ಲಿ ಯಾರಿಗೆ ಸ್ಥಾನ ನೀಡಬೇಕೆಂಬುದು ಸಿಎಂಗೆ ಬಿಟ್ಟಿದ್ದು”

ಈ ಸುದ್ದಿಯನ್ನು ಶೇರ್ ಮಾಡಿ

ಚಿತ್ರದುರ್ಗ, ಡಿ.16- ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನಮಾನ ನೀಡಬೇಕು ಎಂದು ನಿರ್ಧರಿಸುವುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಬಿಟ್ಟಿದ್ದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ನಗರದ ಮುರುಘಾಮಠಕ್ಕೆ ಇಂದು ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಸಚಿವ ಸ್ಥಾನ ಹಂಚಿಕೆಯಲ್ಲಿ ಯಡಿಯೂರಪ್ಪ ಅವರ ನಿರ್ಧಾರವೇ ಅಂತಿಮವಾಗಿದ್ದು, ಸಚಿವ ಸ್ಥಾನ ನೀಡುವ ತೀರ್ಮಾನ ರಾಜ್ಯಾಧ್ಯಕ್ಷರ ಕೈಯಲ್ಲಿಲ್ಲ. ಯಡಿಯೂರಪ್ಪನವರು ನಿರ್ಧಾರ ತೆಗೆದುಕೊಂಡ ಬಳಿಕ ಅವರ ಜೊತೆ ಚರ್ಚೆ ನಡೆಸಲಾಗುವುದು ಎಂದರು.

ಜಿಲ್ಲೆಯ ಶಾಸಕರು ಸಚಿವಗಿರಿಗೆ ನಡೆಸುತ್ತಿರುವ ಲಾಬಿಗೆ ಪ್ರತಿಕ್ರಿಯಿಸಿದ ಅವರು, ಎಲ್ಲರಿಗೂ ಸಚಿವ ಸ್ಥಾನದ ಆಸೆ ಇರುತ್ತೆ, ಎಲ್ಲ ಜಿಲ್ಲೆಗಳಿಗೂ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು. ಇನ್ನು ಪೌರತ್ವ ತಿದ್ದುಪಡಿಗೆ ಕಾಂಗ್ರೆಸ್ ವಿರೋಧಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಈಗಾಗಲೇ ದೇಶದಲ್ಲಿ ದಿವಾಳಿಯಾಗಿದ್ದು ಕಾಂಗ್ರೆಸ್ ಭೌತಿಕ ವೈಚಾರಿಕ ಸಂಘ ಸಂಘಟನಾತ್ಮಕವಾಗಿ ಕೂಡ ದಿವಾಳಿಯಾಗಿದೆ. ಬ್ರಿಟಿಷರು ನಮ್ಮನ್ನು ಡಿವೈಡ್ ಅಂಡ್ ರೂಲ ಮಾಡುತ್ತಿದ್ದರು.

ಬ್ರಿಟಿಷರು ಬಿಟ್ಟು ಹೋದ ಡಿವೈಡ್ ಅಂಡ್ ರೂಲï ಈಗ ಕಾಂಗ್ರೆಸ್ ಮಾಡುತ್ತಿದೆ ಬರುತ್ತೋ ತಿದ್ದುಪಡಿಯಿಂದ ಇಲ್ಲಿನ ಮುಸ್ಲಿಂ ಸಮುದಾಯದವರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಹೇಳಿದರು. ಇದೇ ವೇಳೆ ಬಿಜೆಪಿ ಶಾಸಕ ಜಿ.ತಿಪ್ಪಾರೆಡ್ಡಿ, ಚಂದ್ರಪ್ಪ ಸೇರಿದಂತೆ ಹಲವು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Facebook Comments