ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು..!

ಈ ಸುದ್ದಿಯನ್ನು ಶೇರ್ ಮಾಡಿ

ವಿಜಯಪುರ,ಜೂ 8- ನಂದಿ ವಿಗ್ರಹಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಡೆದಿದೆ. ಇಂದು ಬೆಳಗಿನ ಜಾವ ಪೂಜಾ ವಿಧಿ-ವಿಧಾನ ನಡೆಸುವ ವೇಳೆ ಈ ಕೃತ್ಯ ಬೆಳಕಿಗೆ ಬಂದಿದೆ. ಪೂಜೆ ಬಳಿಕ ದೇವಸ್ಥಾನದಲ್ಲಿ ಯಾರೂ ಇಲ್ಲದನ್ನು ಗಮನಿಸಿದ ಕಿಡಿಗೇಡಿಗಳಿಂದ ನಂದಿ ವಿಗ್ರಹಕ್ಕೆ ಚಪ್ಪಲಿ ಹಾಕಿದ್ದಾರೆ.

ಕಿಡಿಗೇಡಿಗಳ ಈ ಕೃತ್ಯಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ಶ್ವಾನ ದಳ ಕರೆಸಿ ಆರೋಪಿಗಳನ್ನು ಬಂಧಿಸಿ ಶಿಕ್ಷಿಸುವಂತೆ ಆಗ್ರಹಿಸಿದ್ದಾರೆ.  ಕೂಡಗಿ ಎನ್ ಟಿಪಿಸಿ ಪೊಲೀಸ್ ಠಾಣೆ ಪಿಎಸ್‍ಐ ಬಸವರಾಜ್ ಅವಟಿ ದೇವಸ್ಥಾನಕ್ಕೆ ಭೇಟಿ, ಪರಿಶೀಲನೆ ನಡೆಸಿದರು.

ಈ ಸುದ್ದಿಯನ್ನೂ ಓದಿ… >  ಭಾರೀ ಮಳೆ: ಜನಜೀವನ ಅಸ್ತವ್ಯಸ್ಥ : ವಿಜಯಪುರ, ಬೀದರ್ ಜಿಲ್ಲೆಯ ಹಲವೆಡೆ ನಿನ್ನೆ ಭಾರೀ ಗಾಳಿ ಸಹಿತ ಮಳೆ ಸುರಿದ ಪರಿಣಾಮ ಹಲವೆಡೆ ಮರಗಳು ನೆಲಕ್ಕುರುಳಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ಥವಾಗಿದೆ.

ವಿಜಯಪುರ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದ್ದು, ರೈತರು ಹರ್ಷ ವ್ಯಕ್ತಪಡಿಸಿದ್ದಾರೆ. ನಿನ್ನೆ ತಡರಾತ್ರಿಯವರೆಗೆ ಗುಡುಗು ಸಹಿತ ಬಿದ್ದ ಭಾರೀ ಮಳೆಗೆ ಜಿಲ್ಲೆಯ ನಾಲತವಾಡ್ ಪಟ್ಟಣದಲ್ಲಿ 160 ವರ್ಷದಷ್ಟು ಹಳೆಯದಾದ ಬೃಹತ್ ಆಲದ ಮರ ನೆಲಕ್ಕುರುಳಿದೆ.

ಪಂಚಾಯತ್ ಕಟ್ಟಡದ ಬಳಿ ಇರುವ ಈ ಮರ ತಡರಾತ್ರಿ ಬಿದ್ದ ಪರಿಣಾಮ ಯಾವುದೇ ಅನಾಹುತ ಸಂಭವಿಸಿಲ್ಲ. ಬೀದರ್‍ನ ಹಲವೆಡೆ ಭಾರೀ ಗಾಳಿ, ಮಳೆಯಿಂದ ಮನೆಯ ಮೇಲ್ಛಾವಣಿಗಳು ಕುಸಿದಿವೆಯಾದರೂ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಭಾರೀ ಮಳೆಗೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹೊಲ ಗದ್ದೆಗಳಿಗೆ ನೀರು ನುಗ್ಗಿ ಹಲವೆಡೆ ಬೆಳೆದು ನಿಂತ ಬೆಳೆಗಳು ಹಾಳಾಗಿವೆ.

Facebook Comments

Sri Raghav

Admin