ರಾಜ್ಯಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಅವಿರೋಧ ಆಯ್ಕೆ..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.22- ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಯ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಕೊರಗಪ್ಪ ಅವಿರೋಧ ಆಯ್ಕೆಯಾಗಿದ್ದು, ಅಕೃತ ಪ್ರಕಟಣೆ ಮಾತ್ರ ಬಾಕಿ ಉಳಿದಿದೆ. ರಾಜ್ಯಸಭೆ ಉಪಚುನಾವಣೆ ಕಣದಲ್ಲಿ ನಾರಾಯಣ ಕೊರಗಪ್ಪ ಅವರು ಮಾತ್ರ ಉಳಿದಿದ್ದು, ನಾಳೆ ಸಂಜೆ ವೇಳೆಗೆ ಅಕೃತ ಪ್ರಕಟಣೆ ಹೊರಬೀಳಲಿದೆ.

ನಾಳೆಯವರೆಗೂ ನಾಮಪತ್ರ ವಾಪಸ್ ಪಡೆಯಲು ಕಾಲಾವಕಾಶವಿದೆ. ನಾಮಪತ್ರ ವಾಪಸ್ ಪಡೆಯುವ ಗಡುವು ಮುಗಿದ ಬಳಿಕ ರಾಜ್ಯಸಭೆ ಚುನಾವಣಾಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ (ಪ್ರ) ಎಂ.ಕೆ.ವಿಶಾಲಾಕ್ಷಿ ಅವರು ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಪ್ರಕಟಿಸಲಿದ್ದಾರೆ.

ವಿಧಾನಸಭೆಯಲ್ಲಿ ಶಾಸಕರ ಸಂಖ್ಯಾಬಲ ಕಡಿಮೆ ಇರುವ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್, ರಾಜ್ಯಸಭೆಯ ಉಪಚುನಾವಣೆ ಸ್ಪರ್ಧೆಯಿಂದ ದೂರ ಉಳಿದಿದ್ದವು. ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗೆ ಮತದಾನ ನಡೆದಿದ್ದರೂ ಗೆಲುವು ಸುಲಭವಾಗುತ್ತಿತ್ತು. ಸ್ರ್ಪಸಿದರೂ ಗೆಲುವು ಅಸಾಧ್ಯ ಎಂಬುದನ್ನು ಅರಿತಿದ್ದ ಪ್ರತಿಪಕ್ಷಗಳು ಚುನಾವಣೆಯಲ್ಲಿ ಸ್ರ್ಪಸಲಿಲ್ಲ. ಹೀಗಾಗಿ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆಯಾದಂತಾಗಿದೆ.

ರಾಜ್ಯಸಭಾ ಸದಸ್ಯರಾಗಿದ್ದ ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಭಾರತದ ಚುನಾವಣಾ ಆಯೋಗ ಉಪಚುನಾವಣೆಯನ್ನು ನಡೆಸುತ್ತಿದೆ.

Facebook Comments