ರಾಜಧಾನಿಯಲ್ಲಿ ಮೋದಿಗೆ ಭವ್ಯ ಸ್ವಾಗತಕ್ಕೆ ಸಿದ್ಧತೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮೇ 23- ಕ್ಷೇತ್ರದಲ್ಲಿ ದಾಖಲೆಯ ಎರಡನೆ ಬಾರಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ರಚನೆಗೆ ಸಜ್ಜಾಗುತ್ತಿದ್ದು , ರಾಜಧಾನಿ ದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ಇಂದು ಸಂಜೆ ಅದ್ಧೂರಿ ಕಾರ್ಯಕ್ರಮಕ್ಕೆ ವೇದಿಕೆ ಸಜ್ಜಾಗಿದೆ.

ನರೇಂದ್ರ ಮೋದಿ ಎರಡನೆ ಬಾರಿ ಪ್ರಧಾನಿಯಾಗುತ್ತಿದ್ದು , ಇಂದು ಸಂಜೆ ಮೋದಿ ಅವರಿಗೆ ಭವ್ಯ ಸ್ವಾಗತ ನೀಡಲಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ನಾಯಕರು, ಎನ್‍ಡಿಎ ಮಿತ್ರ ಪಕ್ಷಗಳ ಮುಖಂಡರು ಭಾಗವಹಿಸಲಿದ್ದಾರೆ. ಅಲ್ಲದೆ 20,000 ಪಕ್ಷದ ಕಾರ್ಯಕರ್ತರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ.

ವಿಜೇತರಿಗೆ ದೆಹಲಿಗೆ ಬುಲಾವ್ : ಲೋಕಸಭಾ ಚುನಾವಣೆಯಲ್ಲಿ ಪಕ್ಷದ ನೂತನ ಸಂಸದರು ಮತ್ತು ಶಾಸಕರು ಮೇ 25ರಂದು ರಾಜಧಾನಿ ದೆಹಲಿಗೆ ಆಗಮಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ನೀಡಿದ್ದಾರೆ. [ LOKSABHA ELECTIONS 2019 RESULT – Live Updates]

Facebook Comments

Sri Raghav

Admin