ಕಾಲೇಜುಗಳಲ್ಲಿ ಕಡ್ಡಾಯಗೊಳಿಸಲು ರಾಷ್ಟ್ರಗೀತೆಗೆ ಚಿಂತನೆ

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ,ಫೆ.13- ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲು ಮಹಾರಾಷ್ಟ್ರ ಸರಕಾರ ಚಿಂತನೆ ನಡೆಸಿದೆ. ಉನ್ನತ್ತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಉದಯ್ ಸಾಮಂತ್ ಈ ಬಗ್ಗೆ ತಿಳಿಸಿದ್ದು, ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ರಾಷ್ಟ್ರಗೀತೆಯನ್ನು ಕಡ್ಡಾಯಗೊಳಿಸಲು ಚಿಂತನೆ ನಡೆಸಲಾಗಿದೆ. ಫೆ. 19ರಿಂದ ಈ ನಿಯಮ ಜÁರಿಗೆ ಬರುವ ಸಾದ್ಯತೆ ಇದೆ ಎಂದು ತಿಳಿಸಿದ್ದಾರೆ.

ಫೆ.19 ಛತ್ರಪತಿ ಶಿವಾಜಿ ಮಹಾರಾಜರ ಜನ್ಮಶತಮಾನೋತ್ಸವವಾಗಿರುವುದರಿಂದ ಅಂದಿನಿಂದಲೇ ಎಲ್ಲಾ ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದ್ದಾರೆ.  ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವ ಮಾದರಿಯಲ್ಲೇ, ಕಾಲೇಜುಗಳಲ್ಲೂ ಕಡ್ಡಾಯವಾಗಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Facebook Comments