ಸ್ವಚ್ಛತಾ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭಾಗಿ

ಈ ಸುದ್ದಿಯನ್ನು ಶೇರ್ ಮಾಡಿ

ಚಿತ್ರದುರ್ಗ, ಸೆ.16-ನಗರದ ಜಿಲ್ಲಾಸ್ಪತ್ರೆಗೆ ಇಂದು ಬೆಳಗ್ಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಸ್ಪತ್ರೆ ವತಿಯಿಂದ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಸ ಗುಡಿಸುವ ಮೂಲಕ, ಸ್ವಚ್ಛತಾ ಕಾರ್ಯಕ್ರಮಕ್ಕೆ ಉತ್ಸಾಹ ತುಂಬಿದರು ನಂತರ ಜಿಲ್ಲಾಸ್ಪತ್ರೆಯ ಕುಂದು ಕೊರತೆಗಳ ಬಗ್ಗೆ ಪರಿಶೀಲಿಸಿದ ಅವರು, ಕೆಲವು ರೋಗಿಗಳ ಸಂಬಂಧಿಕರಿಂದ ಆಸ್ಪತ್ರೆಯ ಸಮಸ್ಯೆಗಳನ್ನು ಆಲಿಸಿದರು.

ನಂತರ ನಗರದ ಸ್ಟೇಡಿಯಂ ರಸ್ತೆಯಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ ಸ್ಥಳಕ್ಕೆ ಭೇಟಿ ನೀಡಿ ಪೂಜ ಕಾರ್ಯದಲ್ಲಿ ಪಾಲ್ಗೊಂಡು ಗಣಪತಿ ದರ್ಶನ ಪಡೆದರು.  ಅಲ್ಲದೆ, ಜಿಲ್ಲಾಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ, ಬಿಜೆಪಿ ಪಕ್ಷ ಸಂಘಟನೆಯ ಬಗ್ಗೆ ಹಾಗೂ ಸರ್ಕಾರದ ಸೌಲಭ್ಯಗಳ ಬಗ್ಗೆ ಬಿಜೆಪಿ ಪದಾಧಿಕಾರಿಗಳ ಜತೆ ಮಹತ್ವದ ಚರ್ಚೆ ನಡೆಸಿದರು.  ಇದೇ ವೇಳೆ ಶಾಸಕ ಜಿ. ಎಚ್. ತಿಪ್ಪಾರೆಡ್ಡಿ, ಸಂಸದ ಎ ನಾರಾಯಣಸ್ವಾಮಿಅ ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎಸ. ನವೀನ್ ಸೇರಿದಂತೆ, ವಿವಿಧ ಮುಖಂಡರು ಇದ್ದರು.

Facebook Comments