ಕೊರೊನಾ ಆತಂಕದ ನಡುವೆಯೂ ದೇಶಾದ್ಯಂತ ‘ನೀಟ್’ ಪರೀಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.13- ಕೊರೊನಾ ಕಂಟಕದ ನಡುವೆ ದೇಶಾದ್ಯಂತ ನೀಟ್ ಪರೀಕ್ಷೆ ಸುಗಮವಾಗಿ ನಡೆಯಿತು. ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಕ್ಕಾಗಿ ನಡೆಯುವ ನೀಟ್ ಪರೀಕ್ಷೆಗೆ ದೇಶಾದ್ಯಂತ 15,97,433 ವಿದ್ಯಾರ್ಥಿಗಳು ಹಾಜರಾಗಿದ್ದು, ಕರ್ನಾಟಕದಲ್ಲಿ 1,19,597 ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆದರು.

ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಉಡುಪಿ ಜಿಲ್ಲೆಗಳ ಒಟ್ಟು 298 ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್-19 ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಪರೀಕ್ಷೆ ಬರೆಯಲಾಯಿತು.

ರಾಜ್ಯದಲ್ಲಿ ಕಳೆದ ಬಾರಿ 194 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು. ಈ ಬಾರಿ ಕೊರೊನಾ ಇರುವುದರಿಂದ ಸುರಕ್ಷತಾ ದೃಷ್ಟಿ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಳ ಮಾಡಲಾಗಿದೆ.

ಕೊಠಡಿಗಳಲ್ಲಿ ಪೂರ್ವ ಅಭ್ಯರ್ಥಿಗಳ ಸಂಖ್ಯೆಯನ್ನು 24 ರಿಂದ 12ಕ್ಕೆ ಇಳಿಸಿದ್ದ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳನ್ನು ಹೆಚ್ಚು ಮಾಡಲಾಗಿತ್ತು. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಬರುವಾಗ ಕಡ್ಡಾಯ ಮಾಸ್ಕ್ ಮತ್ತು ಸ್ಯಾನಿಟೈಸರ್ ಗಳಿಸಬೇಕು ಎಂಬ ನಿಯಮ ರೂಪಿಸಲಾಗಿತ್ತು. ವಿದ್ಯಾರ್ಥಿಗಳು ಮತ್ತು ಪರೀಕ್ಷಾ ಕೇಂದ್ರದ ಸಿಬ್ಬಂದಿಗೆ ಥರ್ಮಲ್ ಸ್ಕ್ಯಾನಿಂಗ್ ಹಾಗೂ ಸ್ಯಾನಿಟೈಸರ್ ಮಾಡಿ ಒಳಬಿಡಲಾಯಿತು.

Facebook Comments