ಬಿಡಿಎ ನೂತನ ಅಯುಕ್ತರಾಗಿ ರಾಜೇಶ್ ಗೌಡ ಅಧಿಕಾರ ಸ್ವೀಕಾರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಬಿಡಿಎ ನೂತನ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಎಂ.ಬಿ.ರಾಜೇಶ್ ಗೌಡ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ನೂತನ ಆಯುಕ್ತರಿಗೆ ಶುಭ ಕೋರಿ ಮಾತನಾಡಿದ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು, ಪ್ರಾಧಿಕಾರ ಸಾರ್ವಜನಿಕರ ಸೇವೆಯ ಸಂಸ್ಥೆಯಾಗಿದ್ದು ಸಾರ್ವಜನಿಕ ಸ್ನೇಹಿ ಸಂಸ್ಥೆಯನ್ನಾಗಿ ಮಾಡುವ ಹೊಣೆ ಎಲ್ಲರದ್ದಾಗಿದೆ ಎಂದರು.

ಸಾರ್ವಜನಿಕರು ಸಣ್ಣಪುಟ್ಟ ಕೆಲಸಗಳಿಗಾಗಿ ಬಿಡಿಎಗೆ ಅಲೆಯದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು. ಬಿಡಿಎ ಒಂದು ಕುಟುಂಬ ಇದ್ದಂತೆ. ಎಲ್ಲರೂ ಒಗ್ಗಟ್ಟಾಗಿ ಸಂಸ್ಥೆ ಮತ್ತು ಸಾರ್ವಜನಿಕರ ಏಳ್ಗೆಗಾಗಿ ಶ್ರಮಿಸಿ, ಸಂಸ್ಥೆಗೆ ಹೆಸರು ತರೋಣ ಎಂದರು.

ರಾಜೇಶ್ ಗೌಡ ಅವರು ಮಾತನಾಡಿ, ಸಾರ್ವಜನಿಕರಿಗಾಗಿ ಇರುವ ಸಂಸ್ಥೆಯ ಉನ್ನತಿಗೆ ಕೆಲಸ ಮಾಡಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಬಿಡಿಎಯ ಹಲವಾರು ಅಧಿಕಾರಿಗಳು ಇದ್ದರು.

Facebook Comments

Sri Raghav

Admin