ಪತ್ರಿಕೆ ಹಂಚುವ ಹುಡುಗರು, ಏಜೆಂಟರ್‌ಗಳಿಗೆ ಆಹಾರ ಕಿಟ್

ಈ ಸುದ್ದಿಯನ್ನು ಶೇರ್ ಮಾಡಿ

ಅರಸೀಕೆರೆ, ಮೇ 27- ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲೂ ಬಿಸಿಲು, ಮಳೆ ಎನ್ನದೆ ಪ್ರತಿ ಮನೆ ಮನೆಗೆ ಪತ್ರಿಕೆ ಹಂಚುವ ಹುಡುಗರಿಗೆ, ಪತ್ರಿಕಾ ಏಜೆಂಟರ್‌ಗಳಿಗೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಆಹಾರ ಪದಾರ್ಥಗಳಿರುವ ಕಿಟ್ ವಿತರಿಸುವ ಮೂಲಕ ಮಾನವೀಯತೆ ಮೆರೆಯಲಾಯಿತು.

ಆಹಾರ ಪದಾರ್ಥಗಳ ಕಿಟ್ ವಿತರಿಸಿ ಮಾತನಾಡಿದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಜಿಲ್ಲಾ ನಿರ್ದೇಶಕ ಜಯರಾಂ, ಜಗತ್ತಿನಾದ್ಯಂತ ಕೊರೊನಾ ಮಹಾಮಾರಿಯಿಂದ ಜನರು ನಲುಗಿದ್ದು, ಈ ರಾಷ್ಟ್ರೀಯ ವಿಪತ್ತಿನ ಸಂದರ್ಭದಲ್ಲಿ ಪತ್ರಿಕಾ ವಿತರಕರಿಗಾಗಿ ಪೂಜ್ಯ ವೀರೇಂದ್ರ ಹೆಗ್ಡೆ ಅವರ ಮಾರ್ಗದರ್ಶನದಂತೆ ಆಹಾರದ ಕಿಟ್ ವಿತರಿಸಲಾಗುತ್ತಿದ್ದು, ಇದರಿಂದ ನಿಮ್ಮ ಕಷ್ಟಗಳು ದೂರಾಗದಿದ್ದರೂ ಸಂಕಷ್ಟದ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಆತ್ಮಸ್ಥೈರ್ಯ ತುಂಬುವ ಕಾರ್ಯ ಇದಾಗಿದೆ ಎಂದು ಹೇಳಿದರು.

ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯ ಗಣೇಶ್ ಮೂರ್ತಿ ಮಾತನಾಡಿ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಾಮಾಜಿಕ, ಧಾರ್ಮಿಕ, ಕ್ಷೇತ್ರಗಳಲ್ಲಷ್ಟೆ ಅಲ್ಲದೆ ಶ್ರಮಿಕರು, ಬಡವರ ಮಹಿಳೆಯರು ರೈತರ ಬಗ್ಗೆ ವಿಶೇಷ ಕಾಳಜಿ ವಹಿಸಿ ಸಮಾಜದ ಅಭಿವೃದ್ಧಿಗಾಗಿ ಮಾಡುತ್ತಿರುವ ಕಾರ್ಯ ಅತ್ಯಂತ ಶ್ಲಾಘನೀಯ ಎಂದರು ಕಾಂಗ್ರೆಸ್ ಮುಖಂಡ ಜಿ.ಬಿ.ಶಶಿಧರ್ ಮಾತನಾಡಿ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕಾರ್ಯ ಅಭಿನಂದನಾರ್ಹವಾದದ್ದು ಎಂದು ತಿಳಿಸಿದರು.

ಪತ್ರಕರ್ತರ ಸಂಘದ ಅಧ್ಯಕ್ಷ ಕಣಕಟ್ಟೆ ಕುಮಾರ್ ಕಾರ್ಯದರ್ಶಿ ನವೀನ್, ಹಿರಿಯ ಪತ್ರಕರ್ತ ಸೇತುರಾಮ್,ಯೋಜನಾಧಿಕಾರಿ ಕೆ.ವಿನಾಯಕ್ ಪೈ, ಮೇಲ್ವಿಚಾರಕಿ ಯಶೋಧ, ಕೃಷಿ ಮೇಲ್ವಿಚಾರಕ ಅನಿಲ್ ಮತ್ತಿತರರು ಉಪಸ್ಥಿತರಿದ್ದರು.

Facebook Comments