“ಅತೃಪ್ತ ಶಾಸಕರುಗಳಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಮುಚ್ಚಿದೆ”

ಈ ಸುದ್ದಿಯನ್ನು ಶೇರ್ ಮಾಡಿ

ಗೌರಿಬಿನೂರು, ಜು.28- ಕಾಂಗ್ರೆಸ್ ಪಕ್ಷದ ಶಾಸಕರು ರಾಜೀನಾಮೆ ನೀಡಿ ಮುಂಬೈನಲ್ಲಿರುವ ಅತೃಪ್ತ ಶಾಸಕರ ಮನವೊಲಿಕೆ ಪ್ರಯತ್ನ ಮುಗಿದ ಅಧ್ಯಾಯ ಎಂದು ಮಾಜಿ ಕೃಷಿ ಸಚಿವ ಎನ್.ಎಚ್. ಶಿವಶಂಕರರೆಡ್ಡಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅತೃಪ್ತ ಶಾಸಕರು ಈಗಾಗಲೇ ರಾಜೀನಾಮೆ ಯನ್ನು ವಾಪಸ್ ಪಡೆದುಕೊಳ್ಳುವುದಿಲ್ಲ, ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ ಈ ನಿಟ್ಟಿನಲ್ಲಿ ಅವರಿಗೆ ಕಾಂಗ್ರೆಸ್ ಪಕ್ಷದ ಬಾಗಿಲ ಸಂಪೂರ್ಣವಾಗಿ ಮುಚ್ಚಲಾಗಿದೆ , ಅತೃಪ್ತರು ಪಕ್ಷಕ್ಕೆ ಅನಿವಾರ್ಯವಲ್ಲ ಎಂದು ಹೇಳಿದರು.

ಯಡಿಯೂರಪ್ಪನವರ ಸರಕಾರ ನೀರಿನ ಮೇಲೆ ಗುಳ್ಳೆಯಿದ್ದಂತೆ ಎಷ್ಟು ದಿನಗಳು ಗಂಟೆಗಳು ಇರುತ್ತೋ ಎಂಬ ಅತಂತ್ರ ಸ್ಥಿತಿಯಲ್ಲಿದೆ, ಸರಕಾರ ಅಧಿಕಾರಕ್ಕೆ ಬರಲು 113 ಶಾಸಕರ ಮ್ಯಾಜಿಕ್ ನಂಬರ್ ಬೇಕು, ಈಗಾಗಲೇ ಮೂರು ಮಂದಿ ಶಾಸಕರು ಅನರ್ಹರಾಗಿದ್ದಾರೆ ಮ್ಯಾಜಿಕ್ ನಂಬರ್ ಇಳಿಕೆಯಾಗಬಹುದು, ಯಡಿಯೂರಪ್ಪನವರು ಯಾವ ರೀತಿ ಬಹುಮತ ಸಾಬೀತು ಪಡಿಸುತ್ತಾರೋ ಕಾದುನೋಡಬೇಕಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅತೃಪ್ತರ ರಾಜೀನಾಮೆ ಅಂಗೀಕರಿಸುವುದು ಅಥವಾ ಬಿಡುವುದು ಸ್ಪೀಕರ್ ಅವರ ವಿವೇಚನೆಗೆ ಬಿಟ್ಟಿದ್ದು, ಪಕ್ಷಾಂತರ ನಿಷೇಧ ಕಾಯ್ದೆಯಡಿ ಕಾಂಗ್ರೆಸ್ ಪಕ್ಷ ಸ್ಪೀಕರ್‍ರವಿಗೆ ದೂರು ಕೊಟ್ಟಿದೆ, ಸ್ಪೀಕರ್ ಈಗಾಗಲೇ ವಿಚಾರಣೆ ಆರಂಭಿಸಿದ್ದಾರೆ , ಮೂರು ಮಂದಿ ಈಗಾಗಲೇ ಅನರ್ಹಗೊಂಡಿದ್ದಾರೆ, ಉಳಿದವರ ಕುರಿತು ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೇಶವರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ನರಸಿಂಹಮೂರ್ತಿ, ಮುಖಂಡರಾದ ಎಚ್.ಎನ್.ಪ್ರಕಾಶ್ ರೆಡ್ಡಿ, ಹನುಮಂತರೆಡ್ಡಿ ಹಾಜರಿದ್ದರು.

Facebook Comments