BIG NEWS : ಕರ್ನಾಟಕ ಸೇರಿ 3 ರಾಜ್ಯಗಳಲ್ಲಿ NIA ದಾಳಿ, ಐಸಿಸ್ ಸಂಪರ್ಕ ಹೊಂದಿದ್ದ ಐವರ ಬಂಧನ..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮಾ.15-ಐಸಿಸ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ) ಕರ್ನಾಟಕ, ಕೇರಳ ಹಾಗೂ ದೆಹಲಿಯ 10 ಸ್ಥಳಗಳ ಮೇಲೆ ಏಕ ಕಾಲಕ್ಕೆ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದೆ. ಇಸ್ಲಾಮಿಕ್ ಸ್ಟೇಟ್ ಸಂಘಟನೆಯೊಂದಿಗೆ ಕೆಲವರು ವೈಯಕ್ತಿಕ ಸಂಪರ್ಕ ಇಟ್ಟುಕೊಂಡಿದ್ದು, ದೇಶದ್ರೋಹ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ದೂರು ದಾಖಲಾಗುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಎನ್‍ಐಎ ತಂಡ ಏಕಕಾಲಕ್ಕೆ ಮೂರು ರಾಜ್ಯಗಳ 10 ಸ್ಥಳಗಳ ಮೇಲೆ ಇಂದು ಮುಂಜಾನೆ ದಾಳಿ ನಡೆಸಿದೆ.

ದಾಳಿ ಸಂದರ್ಭದಲ್ಲಿ ಎನ್‍ಐಎ ಅಧಿಕಾರಿಗಳು ಐದು ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದು ಸಮುದಾಯಕ್ಕೆ ಸೇರಿದ ಪ್ರಭಾವಿ ಯುವಕರನ್ನು ಸಾಮಾಜಿಕ ಜಾಲತಾಣದ ಮೂಲಕ ಸಂಪರ್ಕಿಸಿ ಅವರಿಗೆ ಆನ್‍ಲೈನ್ ತರಬೇತಿ ನೀಡಿ ಅವರಿಂದ ಭಾರತದಲ್ಲಿ ದುಷ್ಕøತ್ಯ ನಡೆಸಲು ಪಾಕಿಸ್ತಾನ ಸಂಚು ರೂಪಿಸಿದೆ.

ಪಾಕ್‍ನ ಈ ಒಳಸಂಚಿಗೆ ಕರ್ನಾಟಕ, ದೆಹಲಿ ಮತ್ತು ಕೇರಳದ ಹಲವಾರು ಯುವಕರು ಬಲಿಯಾಗಿ ದೇಶದ್ರೋಹ ಕೃತ್ಯದಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ಎನ್‍ಐಎಗೆ ಗುಮಾನಿ ಬಂದಿತ್ತು. ಹೀಗಾಗಿ ಪ್ರಕರಣ ದಾಖಲಿಸಿದ ಕೇವಲ 48 ಗಂಟೆಗಳಲ್ಲೇ ಆಖಾಡಕ್ಕೆ ಇಳಿದ ಅಧಿಕಾರಿಗಳು ಏಕ ಕಾಲಕ್ಕೆ ಮೂರು ರಾಜ್ಯಗಳ ಹಲವಾರು ಪ್ರದೇಶಗಳ ಮೇಲೆ ದಾಳಿ ನಡೆಸಿದ್ದಾರೆ.

ದಾಳಿ ಸಂದರ್ಭದಲ್ಲಿ ಸೆರೆ ಸಿಕ್ಕಿರುವ ಐವರನ್ನು ರಹಸ್ಯ ಸ್ಥಳದಲ್ಲಿ ಇರಿಸಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಬಂಧಿತರು ಹಲವಾರು ವಿಚಾರಗಳ ಬಗ್ಗೆ ಬಾಯ್ಬಿಟ್ಟಿದ್ದು, ಅವರ ಮಾಹಿತಿಯನ್ನಾಧರಿಸಿ ತನಿಖೆ ತೀವ್ರಗೊಳಿಸಲಾಗಿದೆ.

Facebook Comments