ನಿಖಿಲ್ ಕುಮಾರಸ್ವಾಮಿಗೂ ಕೊರೊನಾ ಪಾಸಿಟಿವ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.17- ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರಿಗೂ ಕೋವಿಡ್ ದೃಢಪಟ್ಟಿದೆ. ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ ಎಂದು ನಿಖಿಲ್ ಕುಮಾರಸ್ವಾಮಿ ಟ್ವಿಟ್‍ನಲ್ಲಿ ತಿಳಿಸಿದ್ದಾರೆ.

ಕೋವಿಡ್ ಪಾಸಿಟಿವ್ ಬಂದಿರುವುದರಿಂದ ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದು, ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ ಎಂದು ಅವರು ಮನವಿ ಮಾಡಿದ್ದಾರೆ.

Facebook Comments