ಮಾ. 25ರಂದು ಮಂಡ್ಯದಲ್ಲಿ ನಿಖಿಲ್ ನಾಮಪತ್ರ ಸಲ್ಲಿಕೆ..?

ಈ ಸುದ್ದಿಯನ್ನು ಶೇರ್ ಮಾಡಿ

ಮಂಡ್ಯ, ಮಾ.21- ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಟ ನಿಖಿಲ್ ಕುಮಾರಸ್ವಾಮಿ ಮಾ. 25ರಂದು ಮಂಡ್ಯ ಲೋಕಸಭಾ ಕ್ಷೇತ್ರ ದ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು, ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿತ್ತು. ಇಂದು ನಾಮಪತ್ರ ಸಲ್ಲಿಸಿದರೂ ಸೋಮವಾರ ನಾಮಪತ್ರ ಪ್ರತಿಯನ್ನು ಸಲ್ಲಿಸುವ ಉದ್ದೇಶವಿತ್ತು.

ಆದರೆ ಕೊನೆಘಳಿಗೆಯಲ್ಲಿ ಇಂದು ನಾಮಪತ್ರ ಸಲ್ಲಿಸುವುದನ್ನು ಮುಂದೂಡಲಾಗಿದೆ ಎಂದು ಜೆಡಿಎಸ್ ಮೂಲಗಳು ಹೇಳಿವೆ. ಕುಮಾರಸ್ವಾಮಿ ಹಾಗೂ ಮಾಜಿಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ಹಲವು ನಾಯಕರು ಅಂದು ಪಾಲ್ಗೊಳಲಿದ್ದಾರೆ. ನಾಮಪತ್ರ ಸಲ್ಲಿಸಿದ ನಂತರ ಬಹಿರಂಗ ಸಭೆ ನಡೆಸುವ ಸಾಧ್ಯತೆಗಳಿವೆ.

# ನಾಳೆ ಪ್ರಜ್ವಲ್ ರೇವಣ್ಣ ನಾಮಪತ್ರ
ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವ ರೇವಣ್ಣ ಅವರು, ನಾಮಪತ್ರ ಸಲ್ಲಿಕೆಗೂ ಮುನ್ನ ಹೊಳೆನರಸಿಪುರ ತಾಲೂಕಿನ ಹರದನಹಳ್ಳಿಯ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯ, ಮಾವಿನಕೆರೆ ಬೆಟ್ಟದರಂಗನಾಥಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಗುವುದು ಎಂದು ಹೇಳಿದರು.
ನಾಳೆ ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಲಾಗುವುದು ನಂತರ ಮಧ್ಯಾಹ್ನ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಲಿದ್ದಾರೆ.

ರಾಜ್ಯದಲ್ಲಿ ಕೋಮುವಾದಿಗಳನ್ನು ದೂರವಿಡುವ ಉದ್ದೇಶದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದ 28ಕ್ಷೇತ್ರಗಳ ಪೈಕಿ 25ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಜಿಲ್ಲೆಯ ಕಾಂಗ್ರೆಸ್ ಮುಖಂಡರಾದ ಬಿ.ಶಿವರಾಂ, ಸಿ.ಎಸ್.ಪುಟ್ಟೇಗೌಡ, ಜಾವಗಲ್ ಮಂಜುನಾಥ್, ವಿಧಾನಪರಿಷತ್ ಸದಸ್ಯ ಎಮ್.ಎ.ಗೋಪಾಲಸ್ವಾಮಿ ಒಳಗೊಂಡಂತೆ ಮುಖಂಡರ ಸಭೆ ಕರೆಯಲಾಗುವುದು ಎಂದು ಹೇಳಿದರು.

ಆತಂರಿಕವಾಗಿ ಸಣ್ಣಪುಟ್ಟ ಗೊಂದಲಗಳಿದ್ದರೂ ಸರಿಪಡಿಸಿಕೊಂಡು ಕಾಂಗ್ರೆಸ್ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಸಹಕರಿಸಬೇಕು ಎಂದು ಹೇಳಿದರು. ಮಾಜಿ ಸಚಿವ ಎ.ಮಂಜು ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ರೇವಣ್ಣ .

ನಮಗೆ ಜಿಲ್ಲೆ ಅಭಿವೃದ್ಧಿ ಮುಖ್ಯ ಎಂದು ಹೇಳಿದರು. ಜಿಲ್ಲೆಯ ಜನರ ಹಾಗೂ ದೇವರ ಆಶೀರ್ವಾದ ಇರುವವರೆಗೂ ಯಾವುದೇ ತೊಂದರೆಯಾಗುವುದಿಲ್ಲ ಎಂದರು. ರಾಜ್ಯದಲ್ಲಿ ಮೈತ್ರಿ ಸರಕಾರ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಮಾಡಿದ ಸಾಲವನ್ನು ಸಾಲಮನ್ನಾ ಮಾಡಿದೆ ಎಂದು ಹೇಳಿದರು.

Facebook Comments

Sri Raghav

Admin