ಫೆ.10ಕ್ಕೆ ನಿಖಿಲ್ ಕುಮಾರಸ್ವಾಮಿ ನಿಶ್ಚಿತಾರ್ಥ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.2- ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಟ ನಿಖಿಲ್ ಕುಮಾರಸ್ವಾಮಿ ಅವರ ನಿಶ್ಚಿತಾರ್ಥ ಫೆ.10ರಂದು ನಗರದ ಖಾಸಗಿ ಹೊಟೇಲ್‍ನಲ್ಲಿ ನೆರವೇರಲಿದೆ. ಮಾಜಿ ಸಚಿವ ಎಂ.ಕೃಷ್ಣಪ್ಪ ಅವರ ಸಹೋದರ ಮಂಜುನಾಥ್ ಅವರ ಮೊಮ್ಮಗಳು ರೇವತಿ ಅವರೊಂದಿಗೆ ನಿಶ್ಚಿತಾರ್ಥ ನಡೆಸಲು ಎರಡು ಕುಟುಂಬಗಳು ನಿರ್ಧರಿಸಿವೆ.

ಚನ್ನಪಟ್ಟಣ-ರಾಮನಗರ ನಡುವೆ ವಿಶೇಷ ಮಂಪಟದಲ್ಲಿ ಅದ್ಧೂರಿ ವಿವಾಹ ನೆರವೇರಿಸಲು ತೀರ್ಮಾನಿಸಿದ್ದು, ಪೂರ್ವಸಿದ್ಧತೆ ಆರಂಭಗೊಂಡಿದೆ. ಏಪ್ರಿಲ್ ಅಥವಾ ಮೇನಲ್ಲಿ ವಿವಾಹ ನಡೆಯಲಿದೆ ಎಂದರು.

Facebook Comments