ಕಾರ್ಮಿಕರ ಒಕ್ಕೂಟಕ್ಕೆ ಚೆಕ್ ರವಾನಿಸಿದ ನಿಖಿಲ್ ಕುಮಾರಸ್ವಾಮಿ

ಈ ಸುದ್ದಿಯನ್ನು ಶೇರ್ ಮಾಡಿ

ಕೊರೋನ ಲಾಕ್ ಡೌನ್ ಇಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕ ಚಲನಚಿತ್ರ ಕಾರ್ಮಿಕರ ಕಷ್ಟಕ್ಕೆ ನಿಖಿಲ್ ಕುಮಾರಸ್ವಾಮಿ ಸ್ಪಂದಿಸಿದ್ದಾರೆ. ಸುಮಾರು 37 ಲಕ್ಷ ರೂಪಾಯಿ ಚೆಕ್ ಅನ್ನು ನಿರ್ಮಾಪಕ ಸಾ.ರಾ.ಗೋವಿಂದು ಅವರಿಗೆ ತಲುಪಿಸಿದ್ದಾರೆ.

ಇಂದು ಸಾ.ರಾ.ಗೋವಿಂದು ಅವರು ಗಾಂಧಿ ನಗರದಲ್ಲಿರುವ ಕರ್ನಾಟಕ ಚಲನಚಿತ್ರ ಕಾರ್ಮಿಕರ ಸಂಘಕ್ಕೆ ಆಗಮಿಸಿ, ಕಾರ್ಮಿಕರ ಸಂಘದ ಕಾರ್ಯದರ್ಶಿ ರವೀಂದ್ರ ಅವರಿಗೆ ನಿಖಿಲ್ ಕುಮಾರಸ್ವಾಮಿ ಅವರು ನೀಡಿರುವ ಪರಿಹಾರದ ಚೆಕ್ ರವಾನಿಸಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜೈರಾಜ್, ನಿರ್ಮಾಪಕರಾದ ಉಮೇಶ್ ಬಣಕಾರ್, ಕೆ.ಎಂ.ವೀರೇಶ್ ಉಪಸ್ಥಿತರಿದ್ದರು.

ಕಿರುತೆರೆಯಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರಿಗೂ ನಿಖಿಲ್ ಕುಮಾರಸ್ವಾಮಿ ಅವರು ಸಹಾಯ ನೀಡಿದ್ದು, ಟಿಲಿವಿಷನ್ ಅಸೋಸಿಯೇಷನ್ ಪರವಾಗಿ ನಟಿ ಅಭಿನಯ ಅವರು ಸಾ.ರಾ.ಗೋವಿಂದು ಅವರಿಂದ ಚೆಕ್ ಪಡೆದರು.

ಕರ್ನಾಟಕ ಚಲನಚಿತ್ರ ಕಾರ್ಮಿಕರಿಗೆ 32 ಲಕ್ಷ ಹಾಗೂ ಕಿರುತೆರೆ ಕಾರ್ಮಿಕರಿಗೆ 5 ಲಕ್ಷ ಒಟ್ಟು 37 ಲಕ್ಷ ರೂಪಾಯಿ ಸಹಾಯವನ್ನು ನಿಖಿಲ್ ಕುಮಾರಸ್ವಾಮಿ ಅವರು ಮಾಡಿದ್ದಾರೆ..

Facebook Comments

Sri Raghav

Admin