ಮಂಡ್ಯದ ಸರ್.ಎಂ.ವಿ ಮೈದಾನದಲ್ಲಿ ಸೋಂಕು ನಿವಾರಕ ಟನಲ್‌ ಸ್ಥಾಪಿಸಿದ ನಿಖಿಲ್

ಈ ಸುದ್ದಿಯನ್ನು ಶೇರ್ ಮಾಡಿ

ಮಂಡ್ಯ : ಕೊರೊನಾ ವೈರಸ್‌ ಹರಡುವುದನ್ನು ತಡೆಯುವ ಸಲುವಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಣಾ ಟನಲ್‌ ಸ್ಥಾಪಿಸಿದ್ದಾರೆ.

ಮಂಡ್ಯದ ಸರ್. ಎಂ. ವಿಶ್ವೇಶ್ವರಯ್ಯ ಮೈದಾನದಲ್ಲಿ ತಾತ್ಕಾಲಿಕ ಮಾರುಕಟ್ಟೆಗೆ ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿ ಟನಲ್‌ ಅನ್ನು ಸ್ಥಾಪಿಸಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಸೂಚಿಸಿದ ಮಾನದಂಡಗಳ ಆಧಾರದಲ್ಲಿ ಟನಲ್ ಗಳನ್ನು‌ ನಿರ್ವಹಣೆ ಮಾಡಲಾಗುತ್ತಿದೆ.

ರಾಮನಗರ ಜಿಲ್ಲೆಯ ನಾಲ್ಕು ಕಡೆ ಕುಮಾರಸ್ವಾಮಿ ಅವರು ಈಗಾಗಲೇ ಟನಲ್ ಗಳನ್ನು ಸ್ಥಾಪಿಸಿದ್ದಾರೆ. ಸರ್ ಎಂವಿ ಮೈದಾನದ ಟನಲ್ ಅನ್ನು ನಿಖಿಲ್ ಕುಮಾರಸ್ವಾಮಿ ಅವರು ನಾಳೆ ಉದ್ಘಾಟಿಸಲಿದ್ದಾರೆ.

ಅಲ್ಲದೇ, ಕೊರೊನಾ ವೈರಸ್‌ ತಡೆಯಲು ದೇಶದಲ್ಲಿ ಜಾರಿಗೆ ತರಲಾಗಿರುವ ಲಾಕ್‌ಡೌನ್‌ನಿಂದಾಗಿ ಆಹಾರದ ಸಮಸ್ಯೆಗೆ ಸಿಲುಕಿರುವವರಿಗಾಗಿ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರು ಈಗಾಗಲೇ ‘ಎಚ್‌ಡಿಕೆ ಜನತಾ ದಾಸೋಹ’ ಎಂಬ ಕಾರ್ಯಕ್ರಮವನ್ನೂ ಜಾರಿಗೆ ತಂದಿದ್ದು, ಈ ಕಾರ್ಯಕ್ರಮವನ್ನು ಕ್ಷೇತ್ರದ ಹಂತದಲ್ಲಿ ಶಾಸಕರು, ನಾಯಕರು, ಮುಖಂಡರು ಪಾಲಿಸುತ್ತಿದ್ದಾರೆ. ಹಸಿದವರಿಗೆ ಈ ಕಾರ್ಯಕ್ರಮದ ಮೂಲಕ ಆಹಾರದ ವ್ಯವಸ್ಥೆ ಮಾಡಲಾಗುತ್ತಿದೆ.

Facebook Comments

Sri Raghav

Admin