ಗಂಡು ಮಗುವಿನ ತಂದೆಯಾದ ನಿಖಿಲ್ ಕುಮಾರಸ್ವಾಮಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ. 24- ಯುವ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರು ಇಂದು ಗಂಡು ಮಗುವಿನ ತಂದೆಯಾಗಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರ ಪತ್ನಿ ರೇವತಿ ಗಂಡು ಮಗುವಿಗೆ ಇಂದು ಜನ್ಮ ನೀಡಿದ್ದಾರೆ. ಇದರಿಂದ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಗೌಡರ ಕುಟುಂಬಕ್ಕೆ ಮರಿ ಮೊಮ್ಮಗನ ಆಗಮನವಾಗಿದೆ.

ರೇವತಿ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಾಯಿ, ಮಗುವಿನ ಆರೋಗ್ಯ ವಿಚಾರಿಸಿದ್ದಾರೆ. ತಾಯಿ, ಮಗು ಇಬ್ಬರು ಆರೋಗ್ಯವಾಗಿದ್ದಾರೆಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದ್ದು, ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

Facebook Comments

Sri Raghav

Admin