ನೀರವ್ ಪರಾರಿಯಾದ ಆರ್ಥಿಕ ಅಪರಾಧಿ : ವಿಶೇಷ ಕೋರ್ಟ್ ಘೋಷಣೆ

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ, ಡಿ.6- ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ ಸುಮಾರು 12 ಸಾವಿರ ಕೋಟಿ ರೂ. ವಂಚಿಸಿ ಪರಾರಿಯಾಗಿರುವ ಕಳಂಕಿತ ವಜ್ರೋದ್ಯಮಿ ನೀರವ್ ಮೋದಿಯನ್ನು ಪರಾರಿಯಾದ ಆರ್ಥಿಕ ಅಪರಾಧಿ ಎಂದು ಮುಂಬೈ ವಿಶೇಷ ನ್ಯಾಯಾಲಯವೊಂದು ಇಂದು ಘೋಷಿಸಿದೆ.

ಕೋಟ್ಯಂತರ ರೂ.ಗಳ ಸಾಲ ಎತ್ತುವಳಿ ಮಾಡಿ ಉದ್ದೇಶ ಪೂರ್ವಕ ಸುಸ್ತಿದಾರರಾಗಿ ಲಂಡನ್‍ಗೆ ಪರಾರಿ ಯಾಗಿರುವ ಕಳಂಕಿತ ಉದ್ಯಮಿ ವಿಜಯ ಮಲ್ಯ ನಂತರ ನೀರವ್ ಮೋದಿ 2ನೆ ದೇಶ ಭ್ರಷ್ಟ ಆರ್ಥಿಕ ಅಪರಾಧಿ ಎಂದು ಅಧಿಕೃತವಾಗಿ ಘೋಷಿಸಲ್ಪಟ್ಟಿದ್ದಾನೆ. ಪ್ರಸ್ತುತ ಲಂಡನ್ ಜೈಲಿನಲ್ಲಿರುವ ನೀರವ್‍ನನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಯತ್ನಗಳು ಮುಂದುವರೆದಿದೆ.

Facebook Comments