ಬದುಕು ಕಟ್ಟಿಕೊಟ್ಟವರನ್ನ  ಮರೆತರೆ ಉಳಿಗಾಲವಿಲ್ಲ: ಸ್ವಾಮೀಜಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.8- ಬದುಕು ಕಟ್ಟಿ ಕೊಟ್ಟವರನ್ನು ಮರೆತರೆ ಉಳಿಗಾಲವಿಲ್ಲ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾ ನಂದನಾಥ ಮಹಾ ಸ್ವಾಮೀಜಿ ಅಭಿಪ್ರಾಯ ಪಟ್ಟರು.

ಉತ್ತರಹಳ್ಳಿ ಮುಖ್ಯರಸ್ತೆಯ ಹೆಲ್ತ್ ಅಂಡ್‍ಎಜುಕೇಷನ್ ಸಿಟಿ ಕ್ಯಾಂಪಸ್‍ನಲ್ಲಿ ಆಯೋಜಿಸಲಾಗಿದ್ದ 12ನೇ ಸಂಸ್ಥಾಪಕರ ದಿನಾಚರಣೆ ಹಾಗೂ ಬಿಜಿಎಸ್ ಉತ್ಸವ ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀಗಳು, ತ್ಯಾಗ ಮನೋಭವದ ಮೇರು ವ್ಯಕ್ತಿಯೊಬ್ಬರು ಮನಸ್ಸು ಮಾಡಿದರೆ ಅದ್ಬುತ ಶಕ್ತಿಯಾಗಿ ಲಕ್ಷಾಂತರ ಜನರಿಗೆ ಬದುಕು ಕಟ್ಟಿಕೊಡಬಹುದು ಎಂಬುದಕ್ಕೆ ಜಗದ್ಗುರು ಶ್ರೀ ಬಾಲಗಂಗಾಧರ ಸ್ವಾಮೀಜಿ ಸಾಕ್ಷಿಯಾಗಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

Facebook Comments