ಸಣ್ಣ ಉದ್ಯಮಿಗಳ ಹಿತ ಕಾಯಲು ಬದ್ಧ : ನಿರ್ಮಲಾ ಸೀತಾರಾಮನ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.10- ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ವಲಯದ ಉದ್ಯಮಿಗಳು ಎದುರಿ ಸುತ್ತಿರುವ ಸಂಕಷ್ಟಗಳ ಪರಿಹಾರಕ್ಕೆ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದ್ದು, ಯಾರೊಬ್ಬರು ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭರವಸೆ ನೀಡಿದ್ದಾರೆ.

ಕೇಂದ್ರ ಸರ್ಕಾರದಿಂದ ಏನೇನು ನೆರವು ಬೇಕಾಗಿದೆ ಎಂಬುದನ್ನು ವರದಿ ರೂಪದಲ್ಲಿ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದರೆ ಆದಷ್ಟು ಶೀಘ್ರ ಆರ್ಥಿಕ ನೆರವು ಸೇರಿದಂತೆ ಎಲ್ಲ ರೀತಿಯ ಸಹಾಯಮಾಡಲು ನಮ್ಮ ಸರ್ಕಾರ ಸಿದ್ದವಿದೆ. ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ವಲಯಗಳ ಉದ್ಯಮಿಗಳ ಹಿತ ಕಾಪಾಡುವುದು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮುಖ ಆದ್ಯತೆಗಳಲ್ಲೊಂದಾಗಿದೆ ಎಂದು ಹೇಳಿದ್ದಾರೆ.

ಇಂದು ಬೆಳಗ್ಗೆ ಎಫ್‍ಕೆಸಿಸಿಐ ಅಧ್ಯಕ್ಷ ಸಿ.ಆರ್.ಜನಾರ್ದನ್ ಅವರೊಂದಿಗೆ ನಿರ್ಮಲಾ ಸೀತಾರಾಮನ್ ಅವರು ದೂರವಾಣಿ ಮೂಲಕ ಮಾತುಕತೆ ನಡೆಸಿ ಪ್ರಸ್ತುತ ಉದ್ಯಮ ವಲಯ ಎದುರಿಸುತ್ತಿರುವ ಬಿಕ್ಕಟ್ಟು ಹಾಗೂ ಕೈಗಾರಿಕೆಗಳಿಗೆ ಕೇಂದ್ರದಿಂದ ಬೇಕಾಗುವ ನೆರವಿನ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು.

ಎಫ್‍ಕೆಸಿಸಿಐ ಅಧ್ಯಕ್ಷ ಜನಾರ್ದನ್ ಅವರು ಹಣಕಾಸು ಸಚಿವರಿಗೆ ಕೈಗಾರಿಕೆಗಳ ಸಂಕಷ್ಟಗಳ ಬಗ್ಗೆ ಸಮಗ್ರ ವಿವರಣೆ ನೀಡಿ, ಆತ್ಮ ನಿರ್ಭರ್ ಯೋಜನೆಯಡಿ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಿಗಳಿಗೆ ನೀಡಲಾಗುತ್ತಿರುವ ಶೇ.20ರಷ್ಟು ಬಂಡವಾಳ ನಿಯನ್ನು ಶೇ.30ಕ್ಕೆ ಹೆಚ್ಚಿಸಬೇಕೆಂದು ಮನವಿ ಮಾಡಿದರು. ಇದಕ್ಕೆ ತಕ್ಷಣವೆ ಸ್ಪಂದಿಸಿದ ನಿರ್ಮಲಾ ಸೀತಾರಾಮನ್ ಅವರು, ಆದಷ್ಟು ಶೀಘ್ರ ಬಂಡವಾಳ ನಿ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ರಕ್ಷಣಾ ಇಲಾಖೆಯಲ್ಲಿ ಸಣ್ಣ ಕೈಗಾರಿಕೆಗಳಿಗೆ ನಾಲ್ಕು ಲಕ್ಷ ಕೋಟಿ ವೆಂಡರ್ ಡೆವಲಪ್‍ಮೆಂಡ್ ನಿಯನ್ನು ನೀಡಲಾಗುತ್ತಿದೆ. ಇದನ್ನು ಹೆಚ್ಚಳ ಮಾಡಬೇಕೆಂದು ಕೋರಿದ್ದಾರೆ. ಆತ್ಮ ನಿರ್ಭರ್ ಯೋಜನೆಯಡಿ ರಕ್ಷಣಾ ಇಲಾಖೆಯ ಪರಿಕರಗಳನ್ನು ರಫ್ತು ಮಾಡಲು ಅವಕಾಶ ನೀಡಿರುವುದರಿಂದ ವಿಶೇಷವಾಗಿ ಸಣ್ಣ ಕೈಗಾರಿಕೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಸ್ವಾವಲಂಬಿ ಉದ್ಯಮಿಗಳು ಇನ್ನಷ್ಟು ಪ್ರಗತಿ ಸಾಸಲು ಸಾಧ್ಯವಾಗುತ್ತದೆ. ಇದಕ್ಕೆ ಉತ್ತೇಜನ ನೀಡಿದ ಪ್ರಧಾನಿ ಮೋದಿ ಅವರಿಗೆ ಎಫ್‍ಕೆಸಿಸಿಐ ವಿಶೇಷವಾಗಿ ಅಭಿನಂದನೆ ಸಲ್ಲಿಸುತ್ತದೆ ಎಂದು ಜನಾರ್ದನ್ ಹೇಳಿದ್ದಾರೆ.

ಇದೇ ವೇಳೆ ಹಣಕಾಸು ಸಚಿವರಿಗೆ ಪ್ರಸ್ತುತ ಮುದ್ರಣ ಮತ್ತು ಕಾಗದ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ. ಕೇಂದ್ರ ಸರ್ಕಾರ ಆರ್ಥಿಕ ಮಿತವ್ಯಯದ ನೆಪದಲ್ಲಿ ಡೈರಿ, ಕ್ಯಾಲೆಂಡರ್‍ಗಳ ಪ್ರಕಟಣೆಗೆ ಕಡಿವಾಣ ಹಾಕಿದೆ. ಸರ್ಕಾರಿ ಸ್ವಾಮ್ಯದ ನಿಗಮ, ಮಂಡಳಿಗಳು, ವಿವಿಧ ಇಲಾಖೆಗಳು ಹಾಗೂ ಬ್ಯಾಂಕಿಂಗ್ ಸಂಸ್ಥೆಗಳು ಡೈರಿ, ಕ್ಯಾಲೆಂಡರ್ ಮುದ್ರಿಸಬಾರದು ಎಂದು ಕೇಂದ್ರ ಸರ್ಕಾರದ ಆರ್ಥಿಕ ಇಲಾಖೆ ಸುತ್ತೋಲೆ ಹೊರಡಿಸಿದೆ.

ಈ ಸುತ್ತೋಲೆಯಿಂದ ದೇಶಾದ್ಯಂತ 1700ಕ್ಕೂ ಹೆಚ್ಚು ಮುದ್ರಣ ಸಂಸ್ಥೆಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿವೆ. ಸುಮಾರು 4 ಲಕ್ಷ ಕುಟುಂಬಗಳು ತೊಂದರೆಗೀಡಾಗಲಿವೆ. ನಿರುದ್ಯೋಗ ಹೆಚ್ಚಾಗಲಿದೆ. ಡೈರಿ, ಕ್ಯಾಲೆಂಡರ್ ಮುದ್ರಣದಿಂದ ಸರ್ಕಾರಕ್ಕೆ ಮತ್ತು ಸಂಸ್ಥೆಗಳಿಗೆ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ.

ಆದರೆ ನಿಯಂತ್ರಣ ಮಾಡಿದರೆ ಮುದ್ರಣ ಉದ್ಯಮದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಡೈರಿ, ಕ್ಯಾಲೆಂಡರ್‍ನಿಂದ ಏರ್ಪಡುವ ಬ್ರಾಂಡಿಂಗ್ ಕೂಡ ನಷ್ಟವಾಗಲಿದೆ ಎಂದು ಜನಾರ್ದನ್ ಅವರು ಕೇಂದ್ರ ಸಚಿವರಿಗೆ ವಿವರಿಸಿದ್ದಾರೆ. ಇದಕ್ಕೆ ಸ್ಪಂದಿಸಿದ ನಿರ್ಮಲಾ ಸೀತಾರಾಮನ್ ಅವರು, ಕೇಂದ್ರ ಆರ್ಥಿಕ ಇಲಾಖೆ ಹೊರಡಿಸಿರುವ ಸುತ್ತೋಲೆಯನ್ನು ಮರು ಪರಿಶೀಲಿಸುವುದಾಗಿ ಭರವಸೆ ನೀಡಿದರು.

ಮುದ್ರಣ ಮತ್ತು ಕಾಗದ ವಲಯಕ್ಕೆ ಕೇಂದ್ರ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ. ಉದ್ಯಮಿಗಳು ಆತಂಕಪಡುವ ಅಗತ್ಯ ಇಲ್ಲ ಎಂದು ತಮಗೆ ಭರವಸೆ ನೀಡಿದ್ದಾರೆ ಎಂದು ಜನಾರ್ದನ್ ತಿಳಿಸಿದ್ದಾರೆ.ಇತ್ತೀಚೆಗೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ವಲಯದ ಉದ್ಯಮಿಗಳು ಎದುರಿಸುತ್ತಿರುವ ಸಂಕಷ್ಟಗಳ ಕುರಿತಂತೆ ಈ ಸಂಜೆ ವಿಸ್ತೃತವಾದ ವರದಿಯನ್ನು ಪ್ರಕಟಿಸಿದ್ದನ್ನು ಸ್ಮರಿಸಬಹುದು.

Facebook Comments

Sri Raghav

Admin