ಆರ್ಥಿಕ ಉತ್ತೇಜನಕ್ಕೆ ಮತ್ತಷ್ಟು ಕ್ರಮ : ನಿರ್ಮಲಾ ಭರವಸೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಡಿ.7- ಆರ್ಥಿಕ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರ ಮತ್ತಷ್ಟು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ದೆಹಲಿಯಲ್ಲಿಂದು ಹಿಂದುಸ್ಥಾನ್ ಟೈಮ್ಸ್ ನಾಯಕತ್ವ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಆಗಸ್ಟ್ ಮತ್ತು ಸೆಪ್ಟೆಂಬರ್‍ನಲ್ಲಿ ಆರ್ಥಿಕ ಉತ್ತೇಜನಕ್ಕಾಗಿ ಕೇಂದ್ರ ಸರ್ಕಾರ ಕೆಲವು ಮಹತ್ವದ ಯೋಜನೆಗಳನ್ನು ಘೋಷಿಸಿದೆ.

ಇದಲ್ಲದೆ ಇನ್ನು ಮತ್ತಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದರು. ಎರಡು ತಿಂಗಳ ಅವಧಿಯಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಸಾರ್ವಜನಿಕ ವಲಯದ ಬ್ಯಾಂಕ್‍ಗಳು 5 ಲಕ್ಷ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ ಎಂದು ವಿತ್ತ ಸಚಿವರು ಹೇಳಿದರು.  ಜಿ.ಎಸ್.ಟಿಯನ್ನು ಮತ್ತಷ್ಟು ಸರಳೀಕರಣಗೊಳಿಸಲಾಗುವುದು. ಹಣದುಬ್ಬರ ಏರಿಕೆಗೆ ಕಡಿವಾಣ ಹಾಕಲು ಈಗಾಗಲೇ ಕೇಂದ್ರ ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದು ನಿರ್ಮಲಾ ತಿಳಿಸಿದರು.

Facebook Comments