ಅಪಘಾತ ನಡೆಯುವ ಸ್ಥಳಗಳನ್ನು ಗುರುತಿಸಲು ರೆಡಿಯಾಯ್ತು 14,000 ಕೋಟಿ ರೂ. ಪ್ಲಾನ್..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜು.11(ಪಿಟಿಐ)- ದೇಶದಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಹೆದ್ದಾರಿಗಳ ಸೂಕ್ಷ್ಮ ಸ್ಥಳಗಳು ಮತ್ತು ನ್ಯೂನ್ಯತೆಗಳನ್ನು ಗುರುತಿಸಲು ಕೇಂದ್ರ ಸರ್ಕಾರ 14,000ಕೋಟಿ ರೂ.ಗಳ ಯೋಜನೆಯನ್ನು ಸಿದ್ಧಪಡಿಸಿದೆ.

ಲೋಕಸಭೆಯಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ ಭೂಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಈ ಯೋಜನೆಗಾಗಿ ಕೇಂದ್ರ ಹಣಕಾಸು ಸಚಿವಾಲಯ ಈಗಾಗಲೇ ತನ್ನ ಸಮ್ಮತಿಯನ್ನು ನೀಡಿದೆ. ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ವಿಶ್ವಬ್ಯಾಂಕ್ ನೆರವು ಕೋರಲಿದೆ ಎಂದು ತಿಳಿಸಿದರು.

ದೇಶದಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಇದು ಪ್ರೋತ್ಸಾಹ ದಾಯಕವಾಗಿಲ್ಲ. ಹೀಗಾಗಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸುವ ಸೂಕ್ಷ್ಮಸ್ಥಳಗಳು ಮತ್ತು ರಸ್ತೆಗಳಲ್ಲಿನ ಲೋಪದೋಷಗಳನ್ನು ಗುರುತಿಸಲು 14,000 ಕೋಟಿ ರೂ. ವೆಚ್ಚದ ಯೋಜನೆ ಸಿದ್ಧವಾಗಿದೆ ಎಂದು ಗಡ್ಕರಿ ತಿಳಿಸಿದರು.

ಅಪಘಾತ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರ ಕೈಗೊಂಡಿರುವ ಕ್ರಮಗಳು ಸ್ವಾಗತಾರ್ಹ. ಆದರೆ ಉಳಿದ ರಾಜ್ಯಗಳು ಈ ನಿಟ್ಟಿನಲ್ಲಿ ಮತ್ತಷ್ಟು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಭೂಸಾರಿಗೆ ಸಚಿವರು ಸಲಹೆ ಮಾಡಿದರು.

Facebook Comments