ಎಫ್‍ಎಫ್‍ಐ ಉಪಾಧ್ಯಕ್ಷರಾಗಿ ಎನ್.ಎಂ. ಸುರೇಶ್ ಆಯ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.30- ಫಿಲಂ ಫೆಡರೇಷನ್ ಆಫ್ ಇಂಡಿಯಾದ (ಎಫ್‍ಎಫ್‍ಐ ಭಾರತೀಯ ಚಲನ ಚಿತ್ರ ಒಕ್ಕೂಟ)ಉಪಾಧ್ಯಕ್ಷರಾಗಿ ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ, ಸಹಕಾರಿ ಧುರೀಣ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಎನ್.ಎಂ. ಸುರೇಶ್ ಅವರು ಆಯ್ಕೆಯಾಗಿದ್ದಾರೆ. ಹಲವಾರು ಸದಬಿರುಚಿಯ ಚಿತ್ರಗಳನ್ನು ನಿರ್ಮಿಸಿ ತಮ್ಮದೇ ಆದ ವರ್ಚಸ್ಸು ಹೊಂದಿರುವ ಸುರೇಶ್ ಅವರು ಎಫ್‍ಎಫ್‍ಐನ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು.

ಎಲ್ಲರ ಸಹಮತದೊಂದಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು , ಚಿತ್ರರಂಗದ ಹಲವು ಗಣ್ಯರು, ನಟರು, ಅಭಿಮಾನಿಗಳು ಶುಭ ಹಾರೈಸಿದ್ದಾರೆ. ಮಲ್ಲೇಶ್ವರಂ ಕೋ ಆಪರೇಟಿವ್ ಬ್ಯಾಂಕ್‍ನ ಮಾಜಿ ಅಧ್ಯಕ್ಷರಾಗಿರುವ ಸುರೇಶ್ ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮ ದೇ ಆದ ಛಾಪು ಮೂಡಿಸಿದ್ದಾರೆ. ಈಗ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಅವರಿಗೆ ಯಶಸ್ಸು ಸಿಗಲಿ ಎಂದು ಕೆ.ಸಿ.ಎನ್.ಚಂದ್ರಶೇಖರ್, ಸಾ.ರಾ.ಗೋವಿಂದು, ಜಯರಾಜ್ ಸೇರಿದಂತೆ ಹಲವರು ಶುಭ ಹಾರೈಸಿದ್ದಾರೆ.

Facebook Comments