ಈ ವರ್ಷ ಯಾವುದೇ ನೇಮಕಾತಿ ಇಲ್ಲ : ಸರ್ಕಾರದಿಂದ ಮಹತ್ವದ ಆದೇಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.12- ಕೋವಿಡ್ ಕಾರಣದಿಂದ ರಾಜ್ಯ ಸರ್ಕಾರ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಆರ್ಥಿಕ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಆರ್ಥಿಕ ಇಲಾಖೆ, ಸರ್ಕಾರಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಹೊಸ ನೇಮಕಾತಿ ಬೇಡವೆಂದು ಆದೇಶ ಹೊರಡಿಸಿದೆ.

ತೀವ್ರ ಆರ್ಥಿಕ ಸಂಕಷ್ಟದಿಂದಾಗಿ ಇಂತಹ ಆದೇಶ ಹೊರಬಿದ್ದಿದೆ ಎನ್ನಲಾಗುತ್ತಿದೆ. ಅನುದಾನಿತ ಶಿಕ್ಷಣ ಸಂಸ್ಥೆಗಳು ಹಾಗೂ ವಿದ್ಯಾರ್ಥಿ ವಸತಿ ನಿಲಯಗಳಲ್ಲಿಯೂ ಯಾವುದೇ ಹೊಸ ನೇಮಕಾತಿ ಬೇಡ ಎಂದು ಹೇಳಿದೆ.

2020-21 ಸಾಲಿನಲ್ಲಿ ಯಾವುದೇ ಭರ್ತಿ ಮಾಡುವಂತಿಲ್ಲ. ಈ ನಿಯಮ ಈಗಾಗಲೇ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವ ನೇಮಕಗಳಿಗೂ ಅನ್ವಯವಾಗಲಿದೆ ಎಂದು ಇಲಾಖೆ ಹೇಳಿದೆ.

ಈ ಸಾಲಿನಲ್ಲಿ ಯಾವುದೇ ಹೊಸ ಅನುದಾನ ರಹಿತ ವಿದ್ಯಾ ಸಂಸ್ಥೆಗಳನ್ನು ವೇತನಾನುದಾನಕ್ಕೆ ಒಳಪಡಿಸುವಂತಿಲ್ಲ. ಈ ಎಲ್ಲಾ ನಿಯಮಗಳು ಸರಕಾರದ ಎಲ್ಲಾ ಇಲಾಖೆಗಳಡಿಯಲ್ಲಿ ಬರುವ ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಹಾಗೂ ವಸತಿ ನಿಲಯಗಳಿಗೆ ಹಾಗೂ ಈಗಾಗಲೇ ವೇತನಾನುದಾನಕ್ಕೆ ಒಳಪಡಿಸಲು ಸ್ವೀಕೃತಿಗೊಂಡಿರುವ ಮತ್ತು ಸ್ವೀಕೃತಗೊಳ್ಳುವ ಅನುದಾನಿತ ಶಿಕ್ಷಣ ಸಂಸ್ಥೆಗಳು ಸೇರಿದಂತೆ, ಇನ್ನುಳಿದ ಅನುದಾನಿತ ಸಂಸ್ಥೆಗಳಿಗೂ ಅನ್ವಯವಾಗಲಿದೆ ಎಂದು ಹೇಳಲಾಗಿದೆ.

ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡ ಈ ಆರ್ಥಿಕ ಸಾಲಿನಲ್ಲಿ ಭರ್ತಿ ಮಾಡದಿರಲು ಸರಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.

Facebook Comments

Sri Raghav

Admin