ಆಕ್ಸಿಜನ್ ಮತ್ತು ರೆಮ್‍ಡಿಸಿವಿರ್ ಸಮರ್ಪಕ ಪೂರೈಕೆಗೆ ನೋಡೆಲ್ ಅಧಿಕಾರಿ ನೇಮಕ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಏ.22- ಆಕ್ಸಿಜನ್ ಮತ್ತು ರೆಮ್‍ಡಿಸಿವಿರ್ ಲಸಿಕೆಯನ್ನು ಸಮರ್ಪಕವಾಗಿ ಪೂರೈಕೆ ಮಾಡಲು ಐಎಎಸ್ ಅಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಅವರನ್ನು ನೋಡೆಲ್ ಅಧಿಕಾರಿಯನ್ನಾಗಿ ನೇಮಿಸಿದೆ. ಬೆಂಗಳೂರು ಸೇರಿದಂತೆ ಮತ್ತಿತರ ಕಡೆ ಆಕ್ಸಿಜನ್ ಮತ್ತು ರೆಮ್‍ಡಿಸಿವಿರ್ ಲಸಿಕೆ ಪೂರೈಕೆಯಲ್ಲಿ ವ್ಯತ್ಯಾಸವಾಗುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ಇವರ ಜೊತೆಗೆ ಲೆಕ್ಕ ಮತ್ತು ಲೆಕ್ಕ ಪರಿಶೋಧನಾ ಇಲಾಖೆಯ ಹಿರಿಯ ಅಧಿಕಾರಿ ನಿಶ್ಚಿತ್.ವಿ.ಡಿ ಅವರನ್ನು ಸಹಾಯಕ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

ಈ ಹಿಂದೆ ನೋಡೆಲ್ ಅಧಿಕಾರಿ ಹಾಗೂ ವಾರ್ರೂಮ್‍ನ ಉಸ್ತುವಾರಿ ನೋಡೆಲ್ ಅಧಿಕಾರಿಯಾಗಿ ನೇಮಕವಾಗಿದ್ದ ವೆಂಕಟ್‍ರಾಜ್ ಅವರಿಗೆ ನೀಡಿದ್ದ ಜವಾಬ್ದಾರಿಯನ್ನು ಹಿಂಪಡೆಯಲಾಗಿದೆ.

Facebook Comments