ನಾಮಪತ್ರ ವಾಪಸ್‍ಗೆ ನಾಳೆ ಕಡೆ ದಿನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.20-ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸಲ್ಲಿಕೆಯಾಗಿರುವ ನಾಮಪತ್ರ ವಾಪಸ್ ಪಡೆಯಲು ನಾಳೆ ಕಡೆಯ ದಿನವಾಗಿದೆ. ನಿನ್ನೆ ನಾಮಪತ್ರಗಳ ಪರಿಶೀಲನೆ ನಡೆದಿದ್ದು, ಸಲ್ಲಿಕೆಯಾಗಿದ್ದ 355 ನಾಮಪತ್ರಗಳ ಪೈಕಿ 54 ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ. ಬಿಜೆಪಿ, ಕಾಂಗ್ರೆಸ್‍ನ ತಲಾ 15 ಅಭ್ಯರ್ಥಿಗಳು ಹಾಗೂ ಜೆಡಿಎಸ್‍ನ 14 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

125 ಸ್ವತಂತ್ರ ಅಭ್ಯರ್ಥಿಗಳು ಸೇರಿದಂತೆ 218 ಅಭ್ಯರ್ಥಿಗಳ 301 ನಾಮಪತ್ರಗಳು ಕ್ರಮಬದ್ಧವಾಗಿವೆ. ನಾಳೆಯವರಗೂ ಸಲ್ಲಿಕೆಯಾಗಿ ರುವ ನಾಮಪತ್ರ ವಾಪಸ್ ಪಡೆಯಲು ಕಾಲಾವ ಕಾಶವನ್ನು ಚುನಾವಣಾ ಆಯೋಗ ನೀಡಿದೆ.

ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕಬ್ಬಿನ ಕಂತಿಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ನಾಮಪತ್ರ ವಾಪಸ್ ಪಡೆಯುವುದಾಗಿ ಘೋಷಿಸಿದ್ದು, ಅವರ ಬದಲಿಗೆ ಸ್ವತಂತ್ರವಾಗಿ ಸ್ಪರ್ಧಿಸಿರುವ ಉಜನೆಪ್ಪ ಕೋಡಿಹಳ್ಳಿ ಅವರಿಗೆ ಜೆಡಿಎಸ್ ಬೆಂಬಲ ಘೋಷಿಸಲಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಅವರ ನಾಮಪತ್ರ ತಿರಸ್ಕøತವಾಗಿದೆ.

ಈ ಕ್ಷೇತ್ರದಲ್ಲಿ ರಾಧಾಕೃಷ್ಣ ಜೆಡಿಎಸ್‍ನ ಅಧಿಕೃತ ಅಭ್ಯರ್ಥಿಯಾಗಿದ್ದಾರೆ. ಇಂದು ಮತ್ತು ನಾಳೆ ರಾಜಕೀಯ ಪಕ್ಷಗಳ ಅಧಿಕೃತ ಅಭ್ಯರ್ಥಿಗಳಿಗೆ ಪ್ರತಿಸ್ಪರ್ಧಿಯಾಗಿ ಸ್ಪರ್ಧಿಸಿರುವ ಬಂಡಾಯಗಾರರ ಮನವೊಲಿಸುವ ಪ್ರಯತ್ನ ನಡೆಯಲಿದೆ.

ಬಂಡಾಯಗಾರರನ್ನು ಮನವೊಲಿಸಿ ನಾಮಪತ್ರ ವಾಪಸ್ ಪಡೆಯುವ ಪ್ರಯತ್ನಗಳನ್ನು ರಾಜಕೀಯ ನಾಯಕರು ಮಾಡಲಿದ್ದಾರೆ. ನಾಳೆ ಸಂಜೆ ವೇಳೆ ಉಪಚುನಾವಣಾ ಕಣದಲ್ಲಿ ಉಳಿಯಲಿರುವ ವಿಧಾನಸಭಾ ಕ್ಷೇತ್ರವಾರು ಅಭ್ಯರ್ಥಿಗಳ ಅಧಿಕೃತ ಪಟ್ಟಿ ಪ್ರಕಟವಾಗಲಿದೆ.

Facebook Comments