ಮೈಸೂರು-ಧಾರವಾಡ ರೈಲಿನ ಮೂಲಕ ಮೂಲಕ ನೆರೆ ಸಂತ್ರಸ್ತರಿಗೆ ಅಗತ್ಯ ಸಾಮಗ್ರಿಗಳ ರವಾನೆ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಆ.19- ನೆರೆ ಸಂತ್ರಸ್ಥರಿಗಾಗಿ ನಗರದಿಂದ ರೈಲು ಮೂಲಕ ಅಗತ್ಯ ಸಾಮಗ್ರಿಗಳನ್ನು ರವಾನೆ ಮಾಡಲಾಯಿತು. ಉತ್ತರ ಕರ್ನಾಟಕ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಳಗಾವಿ ಸೇರಿದಂತೆ ನೆರೆ ಹಾವಳಿಯಿಂದ ಆಸ್ತಿ ಕಳೆದುಕೊಂಡ ಸಂತ್ರಸ್ಥರಿಗೆ ಅಗತ್ಯವಸ್ತುಗಳನ್ನು ರೈಲು ಮೂಲಕ ರವಾನಿಸಲಾಗಿದೆ.

ರಾತ್ರಿ ಹೊರಟ ಮೈಸೂರು-ಧಾರವಾಡ ಎಕ್ಸ್‍ಪ್ರೆಸ್ ಮೂಲಕ ನೆರೆ ಸಂತ್ರಸ್ತ ಪ್ರದೇಶಗಳಿಗೆ ಅಗತ್ಯ ಸಾಮಗ್ರಿಗಳನ್ನು ಆರೋಗ್ಯಾಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ. ಜಿಲ್ಲಾಡಳಿತ, ಪಾಲಿಕೆ ವತಿಯಿಂದ ನಗರದ ಪುರಭವನದಲ್ಲಿ ಆರಂಭಿಸಿರುವ ನೆರವು ಕೇಂದ್ರಕ್ಕೆ 283ಕ್ಕೂ ಹೆಚ್ಚು ಮಂದಿ ಅಗತ್ಯ ಸಾಮಗ್ರಿಗಳನ್ನು ನೀಡಿದ್ದಾರೆ.

ನಗರದ ಸಿದ್ದಿ ವಿನಾಯಕ ದೇವಾಲಯದ ವತಿಯಿಂದ ನೆರೆ ಸಂತ್ರಸ್ಥರ ನಿಧಿಗಾಗಿ ಒಂದು ಲಕ್ಷ ರೂ. ದೇಣಿಗೆ ನೀಡಲಾಗಿದೆ. ಅಲ್ಲದೆ, ಹಲವು ಸಾರ್ವಜನಿಕರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಚೆಕ್ ಮೂಲಕ ಹಣ ಸಂದಾಯ ಮಾಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ