ಬೆಂಗಳೂರಲ್ಲಿ ನ.1ರಿಂದ ಕನ್ನಡ ನಾಮಫಲಕ, ನಿರ್ಲಕ್ಷಿಸಿದರೆ ಪರವಾನಗಿ ರದ್ದು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.25- ನವೆಂಬರ್ 1ರಿಂದ ನಗರದಲ್ಲಿರುವ ಅಂಗಡಿ ಮುಂಗಟ್ಟುಗಳ ಮೇಲೆ ಕನ್ನಡ ನಾಮಫಲಕ ಹಾಕುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಆದೇಶ ಹೊರಡಿಸಿದ್ದಾರೆ. ನಗರದಲ್ಲಿರುವ ಹೋಟೆಗಳು, ಖಾಸಗಿ ಸಂಸ್ಥೆಗಳು, ಪರವಾನಗಿ ಪಡೆದಿರುವ ವ್ಯಾಪಾರಿಗಳು, ಅಂಗಡಿಮುಂಗಟ್ಟುಗಳ ಮಾಲೀಕರು ತಮ್ಮ ಮಳಿಗೆಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಅಗ್ರಸ್ಥಾನದಲ್ಲಿ ಕನ್ನಡ ಭಾಷೆ ಬಳಕೆ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆ ಮಾಡಬೇಕು. ಫಲಕಗಳಲ್ಲಿ ಕನ್ನಡ ಪದಗಳು ಸ್ಪಷ್ಟವಾಗಿ ಕಾಣುವಂತೆ ಮುದ್ರಿಸಬೇಕು, ಒಂದು ವೇಳೆ ಕನ್ನಡ ಭಾಷೆಗೆ ಆದ್ಯತೆ ನೀಡದಿದ್ದರೆ ಅಂತಹ ಮಳಿಗೆಗಳ ವಾಣಿಜ್ಯ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಹೊಸದಾಗಿ ಪರವಾನಗಿ ಅರ್ಜಿ ಸಲ್ಲಿಸುವಂತಹ ಅರ್ಜಿದಾರರಿಗೂ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡುವಂತೆ ಅದಿಕಾರಿಗಳು ಸೂಚನೆ ನೀಡಬೇಕು ಎಂದು ಆಯುಕ್ತರು ಆದೇಶಿಸಿದ್ದಾರೆ.  ಕನ್ನಡ ಅಭಿವೃದಿ ಪ್ರಾದಿಕಾರ ಹಾಗೂ ಕೆಲವು ಕನ್ನಡಪರ ಸಂಘಟನೆಗಳು ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡುವಂತೆ ಹಲವಾರು ಬಾರಿ ಬಿಬಿಎಂಪಿಗೆ ಮನವಿ ಮಾಡಿಕೊಂಡಿದ್ದವು.

ಗೌತಮ್ ಕುಮಾರ್ ಅವರು ಮೇಯರ್ ಆಗಿ ಅದಿಕಾರ ವಹಿಸಿಕೊಂಡ ನಂತರ ನ.1ರಿಂದ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಲಾಗುವುದು ಎಂದು ಘೋಷಿಸಿದ್ದರು.
ಮೇಯg? ಅವರ ಈ ಘೋಷಣೆ ಬೆನ್ನಲ್ಲೇ ಆಯುಕ್ತ ಅನಿಲ್ ಕುಮಾರ್ ಅವರು ನ.1ರಿಂದ ಕನ್ನಡ ಭಾಷೆ ಕಡ್ಡಾಯಕ್ಕೆ ಆದೇಶ ಹೊರಡಿಸಿರುವುದು ಅಭಿನಂದನಾರ್ಹವಾಗಿದೆ.

Facebook Comments