ನಿಮ್ಮ ಭ್ರಷ್ಟಾಚಾರದ ಲೆಕ್ಕಕೊಡಿ : ಸಿದ್ದುಗೆ ಬಿಜೆಪಿ ಸವಾಲ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.17- ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ 97 ಹಗರಣಗಳ ಬಗ್ಗೆಯೂ ಲೆಕ್ಕ ಕೋಡಿ ಎಂದು ಬಿಜೆಪಿ ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದೆ. ಮಾತ್ರವಲ್ಲ ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಸವಾಲು ಹಾಕಿದೆ.

ನಿಮ್ಮ ಸರ್ಕಾರದಲ್ಲಿ ನಡೆದಿದ್ದ ಹಗರಣಗಳ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ದಕ್ಷಿಣ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರು ಸಿದ್ದರಾಮಯ್ಯ ಅವರ ಅಧಿಕೃತ ಕಚೇರಿಗೆ ಪತ್ರ ಬರೆದಿದ್ದಾರೆ.

ಕೋವಿಡ್ ಸೋಂಕು ನಿರ್ವಹಣೆಯಲ್ಲಿ ಭಾರಿ ಪ್ರಮಾಣದ ಭ್ರಷ್ಟಚಾರ ನಡೆದಿದೆ ಎಂದು ಸಿದ್ದರಾಮಯ್ಯ ಆರೋಪಿಸಿ ಸೋಂಕು ನಿವಾರಣೆಗೆ ಬಳಕೆ ಮಾಡಿರುವ ಹಣದ ಲೆಕ್ಕ ಕೋಡಿ ಎಂದು ಸರ್ಕಾರವನ್ನು ಒತ್ತಾಯಿಸಿದ್ದರು.

ಸೋಂಕು ನಿಯಂತ್ರಣಕ್ಕೆ ಬಳಕೆ ಮಾಡಿರುವ ಹಣದ ಲೆಕ್ಕ ಕೊಡಲು ನಾವು ಸಿದ್ದ. ಹಾಗೆಯೇ ನಿಮ್ಮ ಅವಧಿಯಲ್ಲಿ ನಡೆದಿದ್ದ 97 ಬೃಹತ್ ಹಗರಣಗಳ ಬಗ್ಗೆಯೂ ನೀವು ಲೆಕ್ಕ ಕೊಡಬೇಕಲ್ಲವೇ ಎಂದು ಪ್ರಶ್ನಿಸಿರುವ ರಮೇಶ್ ಅವರು, ಮಾಧ್ಯಮಗಳ ಸಮ್ಮುಖದಲ್ಲಿ ಬಹಿರಂಗ ಚರ್ಚೆಗೆ ಬನ್ನಿ ಎಂದು ಸವಾಲು ಹಾಕಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಬರೆದಿರುವ ಬಹಿರಂಗ ಪತ್ರದಲ್ಲಿ ರಮೇಶ್ ಅವರು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿತ್ತು ಎನ್ನಲಾದ 97 ಹಗರಣಗಳಿಗೆ ಸಂಬಂಧಿಸಿದಂತೆ 37 ಸಾವಿರ ಪುಟಗಳ ದಾಖಲೆಯನ್ನು ಲಗತ್ತಿಸಿದ್ದಾರೆ.

Facebook Comments

Sri Raghav

Admin