ನರೇಗಾ ಯೋಜನೆಯಡಿ 9 ಲಕ್ಷ ಮಂದಿಗೆ ಉದ್ಯೋಗ : ಈಶ್ವರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

ಹುಬ್ಬಳ್ಳಿ, ಮೇ 26- ನರೇಗಾ ಯೋಜನೆಯಡಿ ರಾಜ್ಯದಲ್ಲಿ ಈವರೆಗೆ 9 ಲಕ್ಷಕ್ಕೂ ಅಕ ಮಂದಿಗೆ ಉದ್ಯೋಗ ಕಲ್ಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಇಂದಿಲ್ಲಿ ಹೇಳಿದರು.

ಜಿಲ್ಲಾ ಪಂಚಾಯತ್ ಅಕಾರಿಗಳೊಂದಿಗೆ ಸಭೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ನರೇಗಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗುತ್ತಿದೆ.

ಈವರೆಗೆ ರಾಜ್ಯದಲ್ಲಿ 9 ಲಕ್ಷಕ್ಕೂ ಅಕ ಮಂದಿಗೆ ಉದ್ಯೋಗ ನೀಡಲಾಗಿದೆ. ಲಾಕ್‍ಡೌನ್ ಸಡಿಲಿಕೆಯಿಂದಾಗಿ ಹೊರರಾಜ್ಯಗಳಿಂದ ಆಗಮಿಸುವವರಿಂದ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ.

ಬೇರೆ ಬೇರೆ ರಾಜ್ಯಗಳಿಂದ ನಮ್ಮ ರಾಜ್ಯಗಳಿಗೆ ಹಲವಾರು ಜನ ಆಗಮಿಸುವ ಅಪೇಕ್ಷೆ ಹೊಂದಿದ್ದಾರೆ. ರೋಗ ನಿಯಂತ್ರಣಕ್ಕೆ ಸರ್ಕಾರ ಅನೇಕ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುತ್ತಿದೆ. ರಾಜ್ಯಕ್ಕೆ ಆಗಮಿಸುವವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಕೊರೊನಾ ತಡೆಗಟ್ಟುವ ಕಾರ್ಯ ಮಾಡುತ್ತಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮಸ್ಥರು ಶಿಸ್ತಿನಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಜನರಿಂದ ಸರ್ಕಾರದ ನಿಯಮಗಳು ಸರಿಯಾಗಿ ಪಾಲನೆಯಾಗುತ್ತಿವೆ. ಗ್ರಾಮೀಣ ಪ್ರದೇಶದ ಜನರಿಂದ ನರೇಗಾ ಯೋಜನೆ ಯಶಸ್ವಿಯಾಗುತ್ತಿದೆ ಎಂದು ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳಿಗೆ ಸಂಬಂಸಿದ ವಿಷಯಗಳ ಕುರಿತು ಚರ್ಚೆ ನಡೆಸಿದ ಅವರು, ಧಾರವಾಡ ಜಿಲ್ಲೆಯ ಅಂತರ್ಜಲ ಚೇತನ ಮತ್ತು ಮಹಾತ್ಮಗಾಂ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದರು. ಜಿಪಂ ಸಿಇಒ ಸತೀಶ್ ಸೇರಿದಂತೆ ಹಲವು ಅಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Facebook Comments

Sri Raghav

Admin