ಎನ್‌ಟಿಪಿಸಿನಲ್ಲಿ 203 ಇಂಜಿನಿಯರ್ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಶನ್ ಲಿಮಿಟೆಡ್‌ನಲ್ಲಿ (ಎನ್‌ಟಿಪಿಸಿ)  203 ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿಗಾಗಿ ಎನ್‌ಟಿಪಿಸಿ ನೇಮಕಾತಿ 2019 ಪ್ರಕಟಣೆ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆಯಾಗಿದೆ. 06.08.2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 26.08.2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಶನ್ ಲಿಮಿಟೆಡ್‌ನಲ್ಲಿ (ಎನ್‌ಟಿಪಿಸಿ)  203 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಸಂಸ್ಥೆಯಿಂದ ಕನಿಷ್ಠ 60% ಅಂಕಗಳೊಂದಿಗೆ ಎಲೆಕ್ಟ್ರಿಕಲ್ / ಮೆಕ್ಯಾನಿಕಲ್ / ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 21 ರಿಂದ 30 ವಯಸ್ಸಿನ ಮಿತಿಯಲ್ಲಿರಬೇಕು. ಇನ್ನು ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 300/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕವಿಲ್ಲ ಅರ್ಜಿ ಶುಲ್ಕವನ್ನು ಆನ್‌ಲೈನ್‌ಮೂಲಕ ಪಾವತಿಸಬಹುದು.

ಆಯ್ಕೆ ಪ್ರಕ್ರಿಯೆ: ಸಂದರ್ಶನದ ಆಧಾರದ ಮೇಲೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಗಮನಿಸಿ :

Facebook Comments