ಸುಪ್ರೀಂ ಮುಖ್ಯನ್ಯಾಯಮೂರ್ತಿಯಾಗಿ ಎನ್.ವಿ.ರಮಣ ಶಿಫಾರಸು

ಈ ಸುದ್ದಿಯನ್ನು ಶೇರ್ ಮಾಡಿ

ನವ ದೆಹಲಿ, ಮಾ.24- ಮುಂದಿನ ತಿಂಗಳು ನಿವೃತ್ತಿ ಹೊಂದಲಿರುವ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಅವರ ಸ್ಥಾನಕ್ಕೆ ಹಿರಿಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ. ಪ್ರಸ್ತುತ ಮುಖ್ಯ ನ್ಯಾಯಮೂರ್ತಿಯಾಗಿರುವ ಬೋಬ್ಡೆ ಅವರು ಏಪ್ರಿಲ್ 23ರಂದು ನಿವೃತ್ತರಾಗಲಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಬೋಬ್ಡೆ ಅವರ ನಂತರ ಭಾರತದ 48ನೆ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ರಮಣ ಅವರು ನಿಯುಕ್ತಿಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾನದಂಡಗಳ ಪ್ರಕಾರ, ಪ್ರಸ್ತುತ ಮುಖ್ಯ ನ್ಯಾಯಮೂರ್ತಿ ಅವರು ನಿವೃತ್ತರಾಗುವ ಒಂದು ತಿಂಗಳ ಮೊದಲು ಆ ಸ್ಥಾನಕ್ಕೇರುವ ನ್ಯಾಯಮೂರ್ತಿಗಳ ಪಟ್ಟಿಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಿಕೊಡಲಾಗುತ್ತದೆ.

ಇದರನ್ವಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಏಪ್ರಿಲ್ 24ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ. ನ್ಯಾಯಮೂರ್ತಿ ಎನ್.ವಿ.ರಮಣ ಅವರು ಸುಪ್ರೀಂಕೋರ್ಟ್‍ನಲ್ಲಿ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದು, 1957 ಆಗ¸್ಟï 27ರಂದು ಜನಿಸಿದ ರಮಣ ಅವರು ಆಂಧ್ರಪ್ರದೇಶದ ಕೃಷಿ ಕುಟುಂಬದಿಂದ ಬಂದವರಾಗಿದ್ದಾರೆ.

ಕಾನೂನು ಪದವೀಧರರಾದ ನಂತರ ವಕೀಲ ವೃತ್ತಿಯನ್ನು ನಿರ್ವಹಿಸಿ ನಂತರ 2000ದ ಜೂನ್‍ನಲ್ಲಿ ಆಂಧ್ರಪ್ರದೇಶ ಹೈಕೋರ್ಟ್‍ನ ಖಾಯಂ ನ್ಯಾಯಾಧೀಶರಾಗಿ ನೇಮಕ ಗೊಂಡಿದ್ದರು. ನಂತರ ದೆಹಲಿ ಹೈಕೋರ್ಟ್‍ನಲ್ಲಿ ಸೇವೆ ಸಲ್ಲಿಸಿ 2014ರ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿದ್ದರು.

Facebook Comments