1.65 ಲಕ್ಷ ಬೆಲೆಯ ಗಾಂಜಾ ಎಣ್ಣೆ ವಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.14- ಗಾಂಜಾ ಎಣ್ಣೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ರಾಜರಾಜೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶರತ್ ಆರ್. ಮತ್ತು ವರುಣ್ ಸಾಗರ್ ಬಂಧಿತ ಆರೋಪಿಗಳು. ಆರೋಪಿಗಳಿಂದ ಗಾಂಜಾ ಸೊಪ್ಪಿನಿಂದ ತಯಾರಿಸಿದ 1.65 ಲಕ್ಷ ಬೆಲೆಯ 199 ಗ್ರಾಂ ತೂಕದ ಗಾಂಜಾ ಎಣ್ಣೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಗಾರಪ್ಪ ನಗರ ಗ್ಲೋಬಲ್ ಕಾಲೇಜು ಮುಂಭಾಗದ ಬಸ್ ನಿಲ್ದಾಣದ ಬಳಿ ಗಾಂಜಾ ಎಣ್ಣೆ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ರಾಜರಾಜೇಶ್ವರಿನಗರ ಠಾಣೆ ಇನ್ಸ್‍ಪೆಕ್ಟರ್ ನವೀನ್ ಸುಪೇಕರ್ ಮತ್ತು ಸಿಬ್ಬಂದಿ ದಾಳಿ ಮಾಡಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Facebook Comments