1 ಲಕ್ಷ ಟನ್ ತುರ್ತು ದಾಸ್ತಾನು ಈರುಳ್ಳಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಈ ಸುದ್ದಿಯನ್ನು ಶೇರ್ ಮಾಡಿ

ಇಂದೋರ್, ಅ.29- ಈರುಳ್ಳಿ ಬೆಲೆ ಗಗನಕ್ಕೇರುತ್ತಿದ್ದು ಜನರ ಕಣ್ಣಲ್ಲಿ ನೀರು ಹರಿಸುತ್ತಿದೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ತುರ್ತು ದಾಸ್ತಾನಿನಿಂದ (ಬಫರ್ ಸ್ಟಾಕ್ ಅಥವಾ ಕಾಯ್ದಿಟ್ಟ ಸಂಗ್ರಹ) ಒಂದು ಲಕ್ಷ ಟನ್ ಈರುಳ್ಳಿಯನ್ನು ಬಿಡುಗಡೆ ಮಾಡುತ್ತಿದೆ.  ಮಧ್ಯಪ್ರದೇಶದ ಇಂದೋರ್‍ನಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ.

ಈರುಳ್ಳಿ ಬೆಲೆ ಏರಿಕೆಯಿಂದಾಗಿ ದೇಶದ ಜನರಿಗೆ ತೊಂದರೆಯಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ತುರ್ತು ದಾಸ್ತಾನಿನಲ್ಲಿರುವ ಒಂದು ಲಕ್ಷ ಟನ್ ಈರುಳ್ಳಿಯನ್ನು ಭಾರತ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ ನಿಯಮಿತ (ನಫೆಡ್) ಮೂಲಕ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಮಧ್ಯಪ್ರದೇಶದಲ್ಲಿ ನ.3ರಂದು 28 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆ ಅಂಗವಾಗಿ ಇಂದೋರ್ ಜಿಲ್ಲೆಯ ಧರಂಪುರಿಯಲ್ಲಿ ರ್ಯಾಲಿಯೊಂದರಲ್ಲಿ ಮಾತನಾಡಿದ ನಂತರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಕೃಷಿ ಇಲಾಖೆ ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದರು.

Facebook Comments