ಮಕ್ಕಳಿಗೆ ಆನ್​ಲೈನ್​ ಕ್ಲಾಸ್ ನಡೆಸುವ ಮೂಲಕ ಶುಲ್ಕ ವಸೂಲಿಗೆ ಮುಂದಾದ ಧನದಾಹಿ ಶಾಲೆಗಳು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದ ಕೆಲ ಶಾಲೆಗಳು ಎಲ್​ಕೆಜಿ, ಯುಕೆಜಿ ಹಾಗೂ ಪ್ರಾಥಮಿಕ ಮಕ್ಕಳಿಗೆ ಮನೆಯಲ್ಲೇ ಆನ್​ಲೈನ್​ ತರಗತಿ ನಡೆಸಲು ಮುಂದಾಗಿವೆ. ಈ ಮೂಲಕ ಪೋಷಕರಿಂದ ಶುಲ್ಕ ವಸೂಲಿ ಮಾಡುತ್ತಿವೆ.

ಇದು ಸಲ್ಲದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್​​ ಕುಮಾರ್​​ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ‌. ಈ ಸಂಬಂಧ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವ ಸುರೇಶ್ ಕುಮಾರ್, ಅವೈಜ್ಞಾನಿಕವಾಗಿ ದಿನವಿಡೀ ಆನ್‍ಲೈನ್ ತರಗತಿ ನಡೆಸುವಂತಹ ಅವೈಜ್ಞಾನಿಕ ಕ್ರಮಗಳಿಗೆ ಕಡಿವಾಣ ಹಾಕಲು ತಕ್ಷಣ ಕಟ್ಟನಿಟ್ಟಾದ ಸುತ್ತೋಲೆ ಹೊರಡಿಸಬೇಕೆಂದು ಸೂಚನೆ ನೀಡಿದ್ದಾರೆ.

ಮಕ್ಕಳಿಗೆ ಆನ್​ಲೈನ್​ ತರಗತಿ ಅವಶ್ಯಕತೆ ಇರುವುದೇ? ಅಥವಾ ಇಲ್ವಾ? ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ.‌ ಆನ್‍ಲೈನ್ ಮೂಲಕ ಶಿಕ್ಷಣದ ಅವಶ್ಯಕತೆ ಇಲ್ಲದಿರುವ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳಿಗೂ ಈ ಮೂಲಕ ಶಿಕ್ಷಣ ನೀಡುತ್ತೇವೆಂದು ಕೆಲವು ಖಾಸಗಿ ಶಾಲೆಗಳು ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಶೋಷಿಸುತ್ತಿರುವುದು ಇಲಾಖೆಯ ಗಮನಕ್ಕೆ‌ ಬಂದಿದೆ.

ಆನ್‍ಲೈನ್ ತರಗತಿಗಳನ್ನು ನಡೆಸಬೇಕಾದಲ್ಲಿ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲದೇ ಮಕ್ಕಳು ಅನವಶ್ಯಕವಾಗಿ ಶೋಷಣೆಗೆ ಒಳಗಾಗಬಾರದು. ಇಂತಹ ಸಂದರ್ಭದಲ್ಲಿ ಮಕ್ಕಳ ಗಮನದ ಅವಧಿ ಹಾಗೂ ತಾಂತ್ರಿಕ ಪರಿಕರಗಳನ್ನು ಉಪಯೋಗಿಸುವಾಗ ಉಂಟಾಗಬಹುದಾದ ಆರೋಗ್ಯದ ಅಡ್ಡ ಪರಿಣಾಮ ಗಮನದಲ್ಲಿಟ್ಟುಕೊಂಡು ಆನ್‍ಲೈನ್ ಶಿಕ್ಷಣ ನೀಡಬೇಕಾಗುತ್ತದೆ ಎಂದು ಸಲಹೆ ಮಾಡಿದ್ದಾರೆ.

Facebook Comments

Sri Raghav

Admin