ಸಾವಯವ ಮತ್ತು ಸಿರಿಧಾನ್ಯ ಮೇಳದ ಲಾಭ ಪಡೆಯಲು ಬಿ.ಸಿ.ಪಾಟೀಲ್ ಕರೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಸಾವಯವ ಮತ್ತು ಸಿರಿಧಾನ್ಯ ಉತ್ಪಾದನೆ ಯೊಂದಿಗೆ ಜನರಿಗೆ ಆರೋಗ್ಯದ ಮಹತ್ವ ಸಾರುವ ನಿಟ್ಟಿನಲ್ಲಿ ಕೃಷಿ ಇಲಾಖೆ ಹಲವು ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದೀಗ ಅದರ ಮುಂದುವರೆದ ಭಾಗವಾಗಿ ರೈತೋತ್ಪಾದಕರು ಹಾಗೂ ಗ್ರಾಹಕರ ನಡುವೆ ಸಂಪರ್ಕ ಏರ್ಪಡಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆ , ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಹಾಗೂ ಕರ್ನಾಟಕ ಅಡಳಿತ ಸೇವೆ ಅಧಿಕಾರಿಗಳ ಸಂಘ ಸಹಯೋಗದೊಂದಿಗೆ ಸಾವಯವ ಹಾಗೂ ಸಿರಿಧಾನ್ಯ ಮೇಳ ಹಮ್ಮಿಕೊಳ್ಳಲಾಗಿದೆ.

ಇದೇ ಶನಿವಾರ ಡಿ.4 ಮತ್ತು 5ರಂದು ಎರಡು ದಿನಗಳ ಕಾಲ ಬೆಂಗಳೂರಿನ ಕೆಎಎಸ್ ಅಧಿಕಾರಿಗಳ ಸಂಘ ಇಲ್ಲಿ ಮೇಳ ಆಯೋಜನೆಗೊಂಡಿದೆ. ಸಾವಯವ ಮತ್ತು ಸಿರಿಧಾನ್ಯ ಮೇಳಕ್ಕೆ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಉದ್ಘಾಟನೆ ನೆರವೇರಿಸಲಿದ್ದು, ಮೇಳದಲ್ಲಿ ಸಾವಯವ ಹಾಗೂ ಸಿರಿಧಾನ್ಯ ಬೆಳೆಯಲ್ಲಿ ಸಾಧನೆಗೈದ ಪ್ರಗತಿಪರ ರೈತರಿಂದ ವಿಚಾರ ವಿನಿಮಯ, ಸಾವಯವ ಸಿರಿಧಾನ್ಯ ಕೃಷಿಯ ಮಹತ್ವವನ್ನು ಸಾರಲಾಗುತ್ತಿದೆ. ಇದರೊಂದಿಗೆ ಮೇಳದಲ್ಲಿ ಈ ಉತ್ಪನ್ನಗಳ ವಸ್ತುಪ್ರದರ್ಶನ ಸಹ ಹಮ್ಮಿಕೊಳ್ಳಲಾಗಿದೆ.

ಸಾವಯವ ಪದಾರ್ಥಗಳನ್ನು ಉಪಯೋಗಿಸುವದರಿಂದ ಆಗುವ ಪ್ರಯೋಜನ ಗಳ ಬಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ ಮತ್ತು ಈ ಸಾವಯವ ಕೃಷಿಯಿಂದ ಸಿಗುವ ಪದಾರ್ಥಗಳು ನಮ್ಮ ಸದೃಢ ಮತ್ತು ಆರೋಗ್ಯಯುತ ಬದುಕು ನಿರ್ಮಾಣ ಮಾಡುವಲ್ಲಿ ಸಹಕಾರಿಯಾಗುತ್ತದೆ ಎಂಬ ಬಯಕೆ ನಮ್ಮದು.

ಆ ದಿಸೆಯಲ್ಲಿ ಆರೋಗ್ಯ ಔಷಧಿಗಾಗಿ ಮತ್ತು ದೇಹಕ್ಕೆ ಅತಿ ಉಪಯುಕ್ತ ಸಿರಿಧಾನ್ಯ ಮತ್ತು ದವಸ-ಧಾನ್ಯ ಬೆಳೆಗಳ ಉಪಯೋಗದ ಬಗೆ ಮಾಹಿತಿ ನೀಡಲಾಗುತ್ತಿದೆ. ಅಲ್ಲದೆ ಇವುಗಳ ಕೃಷಿ ಬಳಕೆಯಿಂದ ಆಗುವ ಲಾಭಾಂಶದ ಕುರಿತು ಹೆಚ್ಚಿನ ಮಾಹಿತಿ ನೀಡಲು ಹಂಚಿಕೊಳ್ಳಲು ಮೇಳ ಉಪಯುಕ್ತವಾಗಲಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

Facebook Comments