ಮಾಜಿ ಲೋಕಸಭಾಧ್ಯಕ್ಷ ಸೋಮನಾಥ ಚಟರ್ಜಿ ನಿಧನಕ್ಕೆ ಗೌಡರ ಸಂತಾಪ

ಈ ಸುದ್ದಿಯನ್ನು ಶೇರ್ ಮಾಡಿ

Devegowda-Somanath-Chatarje

ಬೆಂಗಳೂರು, ಆ.13-ಸಿಪಿಎಂನ ಹಿರಿಯ ನಾಯಕ ಹಾಗೂ ಲೋಕಸಭೆ ಮಾಜಿ ಅಧ್ಯಕ್ಷ ಸೋಮನಾಥ ಚಟರ್ಜಿ ಅವರ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಚಟರ್ಜಿ ಅವರ ನಿಧನ ಮನಸ್ಸಿಗೆ ಬಹಳ ನೋವುಂಟು ಮಾಡಿದೆ. ಅಜಾತಶತ್ರುವಾಗಿದ್ದ ಚಟರ್ಜಿ, ಲೋಕಸಭಾ ಅಧ್ಯಕ್ಷರಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದರು. 1996ರಲ್ಲಿ ಉತ್ತಮ ಸಂಸದೀಯಪಟು ಪ್ರಶಸ್ತಿ ಚಟರ್ಜಿ ಅವರಿಗೆ ದೊರಕಿತ್ತು ಎಂದು ಸ್ಮರಿಸಿದ್ದಾರೆ. ಮೃತರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಮತ್ತು ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಜಿಟಿಡಿ ಸಂತಾಪ:
ಲೋಕಸಭೆಯ ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿ ಅವರ ನಿಧನದಿಂದ ದೇಶಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಉತ್ತಮ ಸಂಸದೀಯ ಪಟುವಾಗಿದ್ದ ಚಟರ್ಜಿ ಅವರು, ಪ್ರಜಾತಾಂತ್ರಿಕ ನಡವಳಿಕೆಯಲ್ಲಿ ರಾಜಕಾರಣಿಗಳಿಗೆ ಮಾದರಿಯಾಗಿದ್ದರು ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin