ಕೇಂದ್ರದಿಂದ ರಾಜ್ಯಗಳಿಗೆ 2 ಕೋಟಿ ಮಾಸ್ಕ್, 10ಕೋಟಿ ಮಾತ್ರೆ ಉಚಿತ ವಿತರಣೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಆ.13- ಡೆಡ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಮತ್ತು ಕೇಂದ್ರ ಆಡಳಿತ ಪ್ರದೇಶಗಳಿಗೆ ಈವರೆಗೆ 3.04 ಕೋಟಿ, ಎನ್ 95 ಮಾಸ್ಕ್‍ಗಳು ಹಾಗೂ 1.28 ಕೋಟಿ ವೈಯಕ್ತಿಕ ಸುರಕ್ಷಿತ ಸಾಧನಗಳು(ಪಿಪಿಇಗಳು) ಉಚಿತವಾಗಿ ವಿತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಮಾ.11ರಿಂದ ಈವರೆಗೆ ದೇಶದ ವಿವಿಧ ರಾಜ್ಯಗಳಿಗೆ 10.23 ಕೋಟಿ ಹೈಡ್ರಾಕ್ಸಿ ಕ್ಲೋರೈಡ್(ಎಸ್‍ಸಿಕ್ಯೂ) ಮಾತ್ರೆಗಳನ್ನು ಉಚಿತವಾಗಿ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೆ 22,533 ಮೇಕಿನ್ ಇಂಡಿಯಾ ವೆಂಟಿಲೇಟರ್‍ಗಳನ್ನು ಸಹ ಪೂರೈಸಲಾಗಿದೆ ಎಂದು ಸಚಿವಾಲಯ ಅಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರದ ವತಿಯಿಂದ ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅಗತ್ಯವಾದ ವೈದ್ಯಕೀಯ ನೆರವು, ಸಾಧನ ಸಲಕರಣೆಗಳನ್ನು ಕೇಂದ್ರ ಸರ್ಕಾರ ಉಚಿತವಾಗಿ ನೀಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Facebook Comments

Sri Raghav

Admin