ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿರುವುದನ್ನು ಒಪ್ಪಿಕೊಂಡ ಸರ್ಕಾರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.26- ಕೊರೊನಾ ಸೋಂಕಿತರಿಗೆ ರಾಜ್ಯದ ಆಸ್ಪತ್ರೆಗಳಲ್ಲಿ ಸಮರ್ಪಕವಾಗಿ ಆಕ್ಸಿಜನ್ ಸಿಗದ ಸಮಸ್ಯೆಯನ್ನು ಸರ್ಕಾರ ಒಪ್ಪಿಕೊಂಡಿದೆ.  ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಸಲು ಸಿಲಿಂಡರ್‍ಗಳ ಅಭಾವ ಎದುರಾಗುವುದರಿಂದ ಸಮಸ್ಯೆಯಾಗಿದೆ. ಈ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿದೆ.

ಕಿಮ್ಸ್ ಆಸ್ಪತ್ರೆಯಲ್ಲಿ ಎದುರಾಗಿದ್ದ ಆಕ್ಸಿಜನ್ ಕೊರತೆ ನಂತರ ಎಚ್ಚೆತ್ತುಕೊಂಡಿರುವ ಸರ್ಕಾರ ಆಕ್ಸಿಜನ್ ಸರಬರಾಜಿನ ತೊಂದರೆ ನಿವಾರಣೆಗೆ ಮುಂದಾಗಿದೆ.

ಮೆಡಿಕಲ್ ಆಕ್ಸಿಜನ್ ಸಿಲಿಂಡರ್‍ಗಳ ಕೊರತೆ ಎದುರಾಗಿರುವುದರಿಂದ ಕೈಗಾರಿಕೆಗಳಿಗೆ ಉಪಯೋಗಿಸುವ ಆಕ್ಸಿಜನ್ ಸಿಲಿಂಡರ್‍ಗಳನ್ನು ಬಳಕೆ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ.

ಇನ್ನು ಮುಂದೆ ಆಕ್ಸಿಜನ್ ಸರಬರಾಜು ಮಾಡುವವರು ಕೈಗಾರಿಕಾ ಆಮ್ಲಜನಕ ಸಿಲಿಂಡರ್‍ಗಳನ್ನು ಉಪಯೋಗಿಸಲು ಅನುಮತಿ ನೀಡಿರುವ ಆದೇಶವನ್ನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಂಜುಂ ಫರ್ವೇಜ್ ಎಚ್ಚರಿಕೆ ನೀಡಿದ್ದಾರೆ.

ಕೊರೊನಾ ಸೋಂಕಿತರಿಗೆ ಆಮ್ಲಜನಕ ಒದಗಿಸಲು ಕೆಲ ಕೈಗಾರಿಕಾ ಸಂಸ್ಥೆಗಳು ಆಕ್ಸಿಜನ್ ಸಿಲಿಂಡರ್ ನೀಡಲು ಹಿಂದೇಟು ಹಾಕಿದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

Facebook Comments

Sri Raghav

Admin