ಆಮ್ಲಜನಕದ ಕೊರತೆಯಿಂದ ರಾಜ್ಯದಲ್ಲಿ ಮತ್ತಷ್ಟು ಸಾವು..!?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 4- ಚಾಮರಾಜನಗರ ಜಿಲ್ಲೆಯ ದುರಂತ ಘಟನೆಯ ಬೆನ್ನಲ್ಲೆ ಆಕ್ಸಿಜನ್ ಕೊರತೆಯಿಂದ ಸಾವಿನ ಸರಣಿಗಳು ಮುಂದುವರೆದಿದ್ದು, ಬೆಂಗಳೂರಿನಲ್ಲಿ ಎರಡು ಮತ್ತು ಕಲ್ಬುರ್ಗಿ ಜಿಲ್ಲೆಯಲ್ಲಿ ನಾಲ್ಕು ಮಂದಿ ಪ್ರಾಣ ಕಳೆದುಕೊಂಡಿರುವ ಮಾಹಿತಿ ಇದೆ.

ಬೆಂಗಳೂರಿನ ಯಲಹಂಕದಲ್ಲಿರುವ ಆರ್ಕ್ ಆಸ್ಪತ್ರೆಯಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಆಮ್ಲಜನಕರ ಕೊರತೆಯಿಂದಾಗಿಯೇ ಜೀವ ಹಾನಿಯಾಗಿದೆ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದಾರೆ. ಇದನ್ನು ತಳ್ಳು ಹಾಕಿರುವ ಆಸ್ಪತ್ರೆ ಆಡಳಿತ ಮಂಡಳಿ, ಕೋವಿಡ್ ಸೋಂಕಿನಿಂದ ಮೃತ ಪಟ್ಟಿದ್ದಾರೆ ಎಂದು ಹೇಳಿದೆ.

ಆಸ್ಪತ್ರೆಯಲ್ಲಿ ಒಟ್ಟು 16 ಮಂದಿ ರೋಗಿಗಳಿದ್ದರು, ಆಮ್ಲಜನಕದ ಕೊರತೆಯಿಂದ ಇಬ್ಬರು ಸಾವನಪ್ಪಿದ್ದಾರೆ ಎಂದು ಹೇಳುತ್ತಿದ್ದಂತೆ ಸ್ಥಳೀಯ ಪೆÇಲೀಸ್ ಅಧಿಕಾರಿ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಆಮ್ಲಜನಕದ ಕೊರತೆ ಇರುವುದನ್ನು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ.

ಅವರು ಕೂಡಲೇ ಬಾಲಿವುಡ್ ನಟ ಸೋನು ಸೂದ್ ಟ್ರಸ್ಟ್‍ನ ಪದಾಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಅವರು ತಕ್ಷಣ ಪ್ರತಿಕ್ರಿಯಿಸಿ ಸುಮಾರು 16ಕ್ಕೂ ಹೆಚ್ಚು ಸಿಲಿಂಡರ್‍ಗಳನ್ನು ಒದಗಿಸಿದ್ದಾರೆ. ಇದರಿಂದ ಹೆಚ್ಚಿನ ಅನಾಹುತ ತಪ್ಪಿದೆ ಎಂದು ಹೇಳಲಾಗಿದೆ.

ಈ ನಡುವೆ ಕಲ್ಬುರ್ಗಿ ಜಿಲ್ಲೆಯ ಅಫ್ಜಲ್‍ಪುರ ತಾಲ್ಲೂಕಿನಲ್ಲಿ ಆಮ್ಲಜನಕದ ಕೊರತೆಯಿಂದ ನಾಲ್ಕವರು ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕಲ್ಬುರ್ಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ಇಬ್ಬರು ಮೃತ ಪಟ್ಟಿದ್ದರು ಎಂದು ಹೇಳಲಾಗಿತ್ತು. ಇಂದು ಅಫ್ಜಲ್‍ಪುರ ತಾಲ್ಲೂಕಿನಲ್ಲಿ ಮತ್ತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇಂದು ಬೆಳಗಿನ ಜಾವ ನಾಲ್ಕು ಗಂಟೆಯಿಂದ ಆಮ್ಲಜನಕದ ಕೊರತೆ ಉಂಟಾಗಿತ್ತು. ಮಧ್ಯಾಹ್ನವಾದರೂ ಆಮ್ಲಜನಕ ಪೂರೈಕೆಯಾಗಲಿಲ್ಲ ಎಂಬ ಆಕ್ರೋಶಗಳು ಕೇಳಿ ಬಂದಿವೆ.ಕಳೆದ ಹತ್ತು ದಿನಗಳಿಂದಲೂ ಜಿಲ್ಲೆಯಲ್ಲಿ ಆಮ್ಲಜನಕದ ಕೊರತೆ ಕಾಡುತ್ತಿದೆ ಎಂದು ಹೇಳಲಾಗಿದೆ. ಕೋವಿಡ್‍ನ ಮೊದಲ ಅಲೆಯಲ್ಲಿ ದೇಶದಲ್ಲೇ ಮೊದಲ ಸಾವಾಗಿದ್ದು ಕಲ್ಬುರ್ಗಿಯಲ್ಲಿ. ಅನಂತರ ಅಲ್ಲಿನ ಇಎಸ್‍ಐ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರೆತೆಯಿಂದಾಗಿ ಆರು ಮಂದಿ ಮೃತ ಪಟ್ಟಿದ್ದರು.

ಈ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಆದಾಗ್ಯೂ ಕಲ್ಬುರ್ಗಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿಲ್ಲ ಎಂದು ಆರೋಪಿಸಲಾಗಿದೆ. ನಿನ್ನೆ ಚಾಮರಾಜನಗರ ಜಿಲ್ಲೆಯಲ್ಲಿ ಆಮ್ಲಜನಕದ ಕೊರತೆಯಿಂದ 24 ಮಂದಿ ಪ್ರಾಣ ಕಳೆದುಕೊಂಡಿದ್ದರು. ದಿನದಿಂದ ದಿನಕ್ಕೆ ರಾಜ್ಯದಲ್ಲಿ ಆಮ್ಲಜನಕ ಕೊರತೆ ತೀವ್ರವಾಗಿದೆ. ಆಮ್ಲಜನಕದ ಕೊರತೆಯಿಂದ ಸಾವುಗಳು ಹೆಚ್ಚಾಗುತ್ತಿವೆ. ಕೆಲವು ಲೆಕ್ಕಕ್ಕೆ ಸಿಕ್ಕದರೆ ಲೆಕ್ಕಕ್ಕೆ ಸಿಗದೆ ಮಣ್ಣಾಗುತ್ತಿರುವ ಸಾವುಗಳು ಹೆಚ್ಚಾಗಿವೆ.

Facebook Comments

Sri Raghav

Admin