4 ಬಾರಿ ಸಂಸದರಾದ ಗದ್ದಿಗೌಡರ್​ಗೆ ಒಲಿಯುತ್ತಾ ಕೇಂದ್ರ ಸಚಿವ ಪಟ್ಟ..?

ಈ ಸುದ್ದಿಯನ್ನು ಶೇರ್ ಮಾಡಿ

ಬಾಗಲಕೋಟೆ, ಮೇ 25-ನಾಲ್ಕು ಬಾರಿ ಸಂಸದರಾಗಿರುವ ಪಿ.ಸಿ.ಗದ್ದಿಗೌಡರ್ ಅವರಿಗೆ ಕೇಂದ್ರದ ಸಚಿವ ಸ್ಥಾನ ಒಲಿಯುವ ಸಾಧ್ಯತೆ ಹೆಚ್ಚಾಗಿದೆ. ಗದ್ದಿಗೌಡರ್ ಅವರ ಬಗ್ಗೆ ಕೇಂದ್ರ ಬಿಜೆಪಿ ಕಚೇರಿಯಿಂದ ಸಂಪೂರ್ಣ ಮಾಹಿತಿ ತರಿಸಿಕೊಳ್ಳಲಾಗಿದೆ.

ನಿಷ್ಠಾವಂತ ಬಿಜೆಪಿಯ ಮುಖಂಡರಾಗಿರುವ ಸರಳ ವ್ಯಕ್ತಿತ್ವದ ಗದ್ದಿಗೌಡರ್ ಜೀವನದುದ್ದಕ್ಕೂ ಕಾಂಗ್ರೆಸ್ ಪಕ್ಷವನ್ನು ವಿರೋಧಿಸಿಕೊಂಡು ಬಂದು ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

ಉತ್ತರ ಕರ್ನಾಟಕ ಭಾಗದ ಲಿಂಗಾಯತ ಮುಖಂಡರು. ತಮ್ಮ ಅವಧಿಯಲ್ಲಿ ಯಾವುದೇ ರೀತಿಯ ಆರೋಪಗಳು ಇವರ ಮೇಲೆ ಇಲ್ಲ. ಸಂಸದರ ಹುದ್ದೆಯನ್ನು ಸಮರ್ಥವಾಗಿ ನಿರ್ವಹಿಸಿದ ಗದ್ದಿಗೌಡರ್ ಅವರಿಗೆ ಈ ಬಾರಿ ಸಚಿವ ಸ್ಥಾನ ಸಿಗುವ ಎಲ್ಲಾ ಸಾಧ್ಯತೆಗಳು ಹೆಚ್ಚಾಗಿದ್ದು, ಕೇಂದ್ರ ಬಿಜೆಪಿ ಕಚೇರಿಯಿಂದ ಇವರ ಸಂಪೂರ್ಣ ಮಾಹಿತಿಯನ್ನು ಕೇಳಲಾಗಿದ್ದು, ಇ-ಮೇಲ್ ಮೂಲಕ ಎಲ್ಲಾ ಮಾಹಿತಿಗಳನ್ನು ಕಚೇರಿಗೆ ರವಾನಿಸಿದ್ದಾರೆ.

ಇವರಿಗೆ ಸಚಿವ ಸ್ಥಾನ ಸಿಕ್ಕರೆ ಲಿಂಗಾಯತರಿಗೆ ಕೇಂದ್ರದಲ್ಲಿ ಸಚಿವ ದೊರೆತಿಲ್ಲ ಎಂಬ ಕೊರತೆ ನೀಗಿದಂತಾಗುತ್ತದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin