ಕ್ರಿಕೆಟ್ ನಲ್ಲಿ ಹೀನಾಯ ಸೋಲಿನಿಂದ ಹತಾಶರಾದ ಪಾಕ್ ಸೈನಿಕರು, ಅಪ್ರಚೋದಿತ ಗುಂಡಿನ ದಾಳಿ..!

ಈ ಸುದ್ದಿಯನ್ನು ಶೇರ್ ಮಾಡಿ

ಜಮ್ಮು(ಪಿಟಿಐ), ಜೂ.17- ಕೆಲ ದಿನಗಳಿಂದ ಗಡಿಯಲ್ಲಿ ತೆಪ್ಪಗಿದ್ದ ಪಾಕಿಸ್ತಾನ ಸೈನಿಕರು ಮತ್ತೆ ಬಾಲ ಬಿಚ್ಚಿದ್ದಾರೆ. ಜಮ್ಮು-ಕಾಶ್ಮೀರದ ಪೂಂಚ್ ಗಡಿಯಲ್ಲಿ ನಿನ್ನೆ ಮಧ್ಯರಾತ್ರಿಯಿಂದ ಪಾಕ್ ಯೋಧರು ಕದನ ವಿರಾಮ ಉಲ್ಲಂಘಿಸಿ ನಡೆಸಿದ ಪ್ರಚೋದಿತ ದಾಳಿಯಲ್ಲಿ ಯೋಧರು ಮತ್ತು ಗ್ರಾಮಸ್ಥರು ಗಾಯಗೊಂಡಿದ್ದಾರೆ.

ಇದಕ್ಕೆ ದಿಟ್ಟ ಪ್ರತ್ಯುತ್ತರ ನೀಡಿರುವ ಭಾರತೀಯ ಭದ್ರತಾ ಪಡೆಗಳು ಪ್ರತಿ ದಾಳಿ ನಡೆಸಿ ಪಾಕ್ ರೇಂಜರ್‍ಗಳನ್ನು ತೆಪ್ಪಗಾಗಿಸಿದ್ದಾರೆ. ಪೂಂಚ್ ವಲಯದ ಗಡಿ ನಿಯಂತ್ರಣ ರೇಖೆಯಲ್ಲಿರುವ ಭಾರತೀಯ ಸೇನಾ ನೆಲೆಗಳು ಮತ್ತು ಗ್ರಾಮಗಳನ್ನು ಗುರಿಯಾಗಿಟ್ಟುಕೊಂಡು ಪಾಕಿಸ್ತಾನ ಸೈನಿಕರು ಅಪ್ರಚೋದಿತ ದಾಳಿ ನಡೆಸಿದರೂ ಇದಕ್ಕೆ ನಮ್ಮ ಯೋಧರು ದಿಟ್ಟ ಪ್ರತ್ಯುತ್ತರ ನೀಡಿದ್ದಾರೆ ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮ್ಯಾಂಚೆಸ್ಟರ್‍ನಲ್ಲಿ ನಿನ್ನೆ ನಡೆದ ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯದ ನಂತರ ಸರ್ಫಾಜ್ ಅಹಮದ್ ಪಡೆ ಹೀನಾಯ ಪರಾಭವಗೊಂಡ ನಂತರ ಪಾಕ್ ಯೋಧರು ಹತಾಶೆಯಿಂದ ಈ ಕೃತ್ಯ ಎಸಗಿದ್ದಾರೆ.

ವಿಶ್ವಕಪ್ ಟೂರ್ನಿಯಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿತಾನ ತಂಡ ಹೀನಾಯವಾಗಿ ಸೋಲನ್ನಪ್ಪಿತ್ತು. ಈ ಹಿನ್ನೆಲೆಯಲ್ಲೇ ಪಾಕಿಸ್ತಾನದಾದ್ಯಂತ ಅಭಿಮಾನಿಗಳು ರೊಚ್ಚಿಗೆದ್ದಿದ್ದರು.

Facebook Comments